ADVERTISEMENT

‘ಆವರ್ತ’ ನವೆಂಬರ್‌ 18ಕ್ಕೆ ತೆರೆಗೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 6:55 IST
Last Updated 2 ನವೆಂಬರ್ 2022, 6:55 IST
‘ಆವರ್ತ’ ಚಿತ್ರ ತಂಡದೊಂದಿಗೆ ಥ್ರಿಲ್ಲರ್‌ ಮಂಜು, ನಾಯಕಿ ನಯನಾ, ನಾಯಕ ಜಯ್‌ ಚಂದ್ರ
‘ಆವರ್ತ’ ಚಿತ್ರ ತಂಡದೊಂದಿಗೆ ಥ್ರಿಲ್ಲರ್‌ ಮಂಜು, ನಾಯಕಿ ನಯನಾ, ನಾಯಕ ಜಯ್‌ ಚಂದ್ರ   

ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ ‘ಆವರ್ತ’. ಚಿತ್ರದ ಹಾಡುಗಳನ್ನು ನಟಿ ತಾರಾ ಅನುರಾಧಾ ಅವರು ಇತ್ತೀಚೆಗೆ ಬಿಡುಗಡೆ ಮಾಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಅನಾವರಣಗೊಳಿಸಿದರು. ನನ್ನ ಮೊದಲ ಚಿತ್ರ ‘ತುಳಸಿದಳ’. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಬಹಳ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ತಾರಾ ಅನುರಾಧ ಶುಭ ಕೋರಿದರು.
ಆವರ್ತದಲ್ಲೇನಿದೆ?

‘ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ?’ ಎಂಬುದು ನಮ್ಮ ಚಿತ್ರದ ಕಥೆ ಎನ್ನುವ ನಿರ್ದೇಶಕ ವೇಮಗಲ್ ಜಗನ್ನಾಥರಾವ್, ನವೆಂಬರ್ 18 ರಂದು ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿದರು.

ADVERTISEMENT

ಕಥೆಗಾರನ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕ ಜಯ್ ಚಂದ್ರ ಹೇಳಿದರು. ಸಿಒಡಿ ಅಧಿಕಾರಿ ಪಾತ್ರಧಾರಿಯಾಗಿ ಧನ್ವಿತ್ ಇದ್ದಾರೆ. ನಯನಾ ಈ ಚಿತ್ರದ ನಾಯಕಿ.

ಮೂರು ಸಾಹಸ ಸನ್ನಿವೇಶಗಳು ಚೆನ್ನಾಗಿವೆ ಎಂದು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ತಿಳಿಸಿದರು. ಸಂಗೀತ ನಿರ್ದೇಶಕ ಅತಿಶಯ್ ಜೈನ್ ಹಾಗೂ ಛಾಯಾಗ್ರಾಹಕ ಮಲ್ಲಿಕಾರ್ಜುನ್ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.