
ನಟ ಉಪೇಂದ್ರ ಪುತ್ರ ಆಯುಷ್ ಉಪೇಂದ್ರ ನಾಯಕನಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇನ್ನೂ ಹೆಸರಿಡದ ಚಿತ್ರವೊಂದರಲ್ಲಿ ನಟಿಸುತ್ತಿದ್ದು, ಕಾಶ್ಮೀರದಲ್ಲಿ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ ಇಬ್ಬರೂ ಮಗನ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ಪ್ರೇಮಕಥೆ ಹೊಂದಿರುವ ಚಿತ್ರಕ್ಕೆ ಪುರುಷೋತ್ತಮ ಸೂರಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇವರು ಈ ಹಿಂದೆ ಯಶ್ ಅಭಿನಯದ ‘ಮೊದಲಾಸಲ’ ಚಿತ್ರವನ್ನು ನಿರ್ದೇಶಿಸಿದ್ದರು. ಅಭಿಷೇಕ್ ಎನ್ ಸಿರಿವಂತ್ ಬಂಡವಾಳ ಹೂಡಿದ್ದಾರೆ.
‘ಆಯುಷ್ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರಕ್ಕೆ ಕಾಶ್ಮೀರದಲ್ಲೇ ಮುಹೂರ್ತ ನೆರವೇರಿದ್ದು, ಅಲ್ಲಿಯೇ 25 ದಿನಗಳ ಮೊದಲ ಹಂತದ ಚಿತ್ರೀಕರಣ ಕೂಡ ನಡೆದಿದೆ. ನಾಯಕನಾಗಲು ಬೇಕಾಗಿರುವ ಪೂರ್ವ ತಯಾರಿಗಳನ್ನೆಲ್ಲ ಆಯುಷ್ ಮಾಡಿಕೊಂಡಿದ್ದಾರೆ’ ಎಂದಿದೆ ಚಿತ್ರತಂಡ
ಎಚ್.ಸಿ.ವೇಣು ಛಾಯಾಚಿತ್ರಗ್ರಹಣ, ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಹಾಗೂ ಉಳಿದ ತಾರಾಬಳಗ ಮತ್ತು ತಂತ್ರಜ್ಞರ ಕುರಿತು ಮಾಹಿತಿ ನೀಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.