ADVERTISEMENT

ಸುಶಾಂತ್‌ ಪ್ರಕರಣ: ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ 

ಏಜೆನ್ಸೀಸ್
Published 11 ಸೆಪ್ಟೆಂಬರ್ 2020, 7:30 IST
Last Updated 11 ಸೆಪ್ಟೆಂಬರ್ 2020, 7:30 IST
ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ
ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ   

ಮುಂಬೈ: ಮಾದಕ ವಸ್ತು ನಿಯಂತ್ರಣ ಸಂಸ್ಥೆಯಿಂದ (ಎನ್‌ಸಿಬಿ) ಬಂಧನಕ್ಕೆ ಒಳಗಾಗಿರುವ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣದಲ್ಲಿ ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ರಿಯಾ ಅವರನ್ನು ಮಂಗಳವಾರ ಬಂಧಿಸಲಾಗಿದ್ದು, ಈ ತಿಂಗಳ 22ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿಚಾರಣೆ ಎದುರಿಸಬೇಕೆಂದು ಸ್ಥಳೀಯ ನ್ಯಾಯಾಲಯ ಆದೇಶಿಸಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಎನ್‌ಸಿಬಿಯಿಂದ ಬಂಧಿತರಾಗಿರುವ ರಿಯಾ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಯ ವಿಚಾರಣೆಯುಕೂಡ ಇದೇ ನ್ಯಾಯಾಲಯದಲ್ಲಿ ನಡೆಯಿತು.

ಸುಶಾಂತ್ ಸಿಂಗ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಸುಶಾಂತ್ ಸಿಂಗ್ ತಂದೆ ಕೆ.ಕೆ.ಸಿಂಗ್ ಅವರು, ನಟಿ ರಿಯಾ ಮತ್ತು ಅವರ ಕುಟುಂಬದವರ ವಿರುದ್ಧ ಜುಲೈ 25ರಂದು ಪಟ್ನಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಪೊಲೀಸರು ರಿಯಾ, ಆಕೆಯ ಪೋಷಕರಾದ ಇಂದ್ರಜಿತ್, ಸಂಧ್ಯಾಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಮತ್ತು ಸ್ಯಾಮುಯೆಲ್ ಮಿರಾಂಡಾ ಮತ್ತು ಶೃತಿ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT