ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ‘ಆ ದಿನಗಳು’ ಖ್ಯಾತಿಯ ಕೆ.ಎಂ.ಚೈತನ್ಯ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪದ್ಮಾವತಿ ಫಿಲ್ಮ್ಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಬಂಡವಾಳ ಹೂಡಿದ್ದಾರೆ.
‘ಬೆಂಗಳೂರು, ಮೈಸೂರು, ಶಿವಮೊಗ್ಗ, ಸಕಲೇಶಪುರ ಮುಂತಾದ ಕಡೆ 80 ದಿನಗಳ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ. 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರವಿದು. ಈ ವರ್ಷವೇ ತೆರೆಗೆ ತರುವ ಯೋಚನೆಯಿದೆ’ ಎಂದು ಚಿತ್ರತಂಡ ಹೇಳಿದೆ.
ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸುತ್ತಿದ್ದಾರೆ. ಅತುಲ್ ಕುಲಕರ್ಣಿ, ಆಶಿಶ್ ವಿದ್ಯಾರ್ಥಿ, ‘ಬಿಗ್ ಬಾಸ್’ ಖ್ಯಾತಿಯ ವಿನಯ್ ಗೌಡ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ.
ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿರುವ ಮೊದಲ ಕನ್ನಡ ಚಿತ್ರವಾಗಿದೆ. ವೇಣು ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.