ADVERTISEMENT

ಪೋಸ್ಟ್ ಪ್ರೊಡಕ್ಷನ್‌ನಲ್ಲಿ ‘ಬಲರಾಮನ ದಿನಗಳು’

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 22:19 IST
Last Updated 26 ನವೆಂಬರ್ 2025, 22:19 IST
ಪ್ರಿಯಾ ಆನಂದ್‌
ಪ್ರಿಯಾ ಆನಂದ್‌   

ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸಿರುವ ‘ಬಲರಾಮನ ದಿನಗಳು’ ಚಿತ್ರದ 2026ರ ಪ್ರಾರಂಭದಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿದೆ. ಕೆ.ಎಂ. ಚೈತನ್ಯ ನಿರ್ದೇಶನದ ಚಿತ್ರ ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. 

‘ತಮಿಳಿನ ಖ್ಯಾತ ಸಂಗೀತ ಸಂಯೋಜಕ ಸಂತೋಷ್ ನಾರಾಯಣ್‌ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಅವರ 51ನೇ ಚಿತ್ರವಿದು. ಡಿಸೆಂಬರ್‌ನಲ್ಲಿ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡುತ್ತೇವೆ. ‘ಆ ದಿನಗಳು’ ಚಿತ್ರದ ಪಾತ್ರಗಳು ಇಲ್ಲೂ ಮುಂದುವರೆದಿದ್ದು, ಅತುಲ್ ಕುಲಕರ್ಣಿ, ಶರತ್ ಲೋಹಿತಾಶ್ವ, ಆಶೀಶ್ ವಿದ್ಯಾರ್ಥಿ ಹಾಗೂ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಸೇರಿ ಹಲವು ಪ್ರತಿಭಾನ್ವಿತ ಕಲಾವಿದರು ಚಿತ್ರದಲ್ಲಿದ್ದಾರೆ’ ಎಂದರು ನಿರ್ದೇಶಕ. 

ಪದ್ಮಾವತಿ ಫಿಲ್ಮ್ಸ್‌ ಬ್ಯಾನರ್‌ ಅಡಿಯಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. 80ರ ದಶಕದ ಕಥೆಯಲ್ಲಿ ವಿನೋದ್ ಪ್ರಭಾಕರ್‌ಗೆ ಪ್ರಿಯಾ ಆನಂದ್ ಜೋಡಿಯಾಗಿದ್ದಾರೆ. ವೇಣು ಛಾಯಾಚಿತ್ರಗ್ರಹಣವಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.