ADVERTISEMENT

₹101 ಕೋಟಿ ಬ್ಯಾಂಕ್ ಸಾಲ ವಂಚನೆ: ನಟ ಅಲ್ಲು ಅರ್ಜುನ್‌ ತಂದೆಗೆ ಇ.ಡಿ ವಿಚಾರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಜುಲೈ 2025, 5:43 IST
Last Updated 5 ಜುಲೈ 2025, 5:43 IST
ಅಲ್ಲು ಅರಂವಿದ್‌
ಅಲ್ಲು ಅರಂವಿದ್‌   

ಹೈದರಾಬಾದ್‌: ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ತಂದೆ ಹಾಗೂ ತೆಲುಗು ಸಿನಿಮಾ ನಿರ್ಮಾಪಕ ಅಲ್ಲು ಅರವಿಂದ್ ಅವರನ್ನು ಜಾರಿ ನಿರ್ದೇಶನಾಲಯ (ಇ,ಡಿ) ವಿಚಾರಣೆಗೆ ಒಳಪಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಅಲ್ಲು ಅರವಿಂದ್ ಅವರನ್ನು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ, ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೈದರಾಬಾದ್ ಮೂಲದ ರಾಮಕೃಷ್ಣ ಎಲೆಕ್ಟ್ರಾನಿಕ್ಸ್‌ ಕಂಪನಿಗೆ ಸಂಬಂಧಿಸಿದಂತೆ ₹ 101 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಅಲ್ಲು ಅರವಿಂದ್ ವಿಚಾರಣೆ ಎದುರಿಸುವಂತಾಗಿದೆ.

ADVERTISEMENT

ರಾಮಕೃಷ್ಣ ಎಲೆಕ್ಟ್ರಾನಿಕ್ಸ್ ಮತ್ತು ಅಲ್ಲು ಅರವಿಂದ್ ಒಡೆತನದ ಕಂಪನಿಗಳ ನಡುವೆ ಕೆಲವು ಅನುಮಾನಾಸ್ಪದ ಹಣಕಾಸಿನ ವಹಿವಾಟುಗಳು ನಡೆದಿರುವುದು ಕಂಡುಬಂದಿರುವುದರಿಂದ ಈ ವಿಚಾರಣೆ ನಡೆದಿದೆ. 

2018-19ರಲ್ಲಿ ಈ ಬ್ಯಾಂಕ್ ವಂಚನೆ ನಡೆದಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. 

ಈ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಕರ್ನೂಲ್, ಹೈದರಾಬಾದ್ ಮತ್ತು ಗಾಜಿಯಾಬಾದ್ ಪ್ರದೇಶಗಳಲ್ಲಿ ಶೋಧ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.