ಕೋಲ್ಕತ್ತ: ಖ್ಯಾತ ಬಂಗಾಳಿ ನಟ ಸೌಮಿತ್ರ ಚಟರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಭಾನುವಾರ ವೈದ್ಯರು ತಿಳಿಸಿದ್ದಾರೆ.
85 ವರ್ಷದ ಚಟರ್ಜಿ ಅವರಿಗೆ ಅಕ್ಟೋಬರ್ 6ರಂದು ಕೋವಿಡ್ ದೃಢಪಟ್ಟಿತ್ತು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್ ಸಂಖ್ಯೆ ಮತ್ತಷ್ಟು ಕುಸಿದಿದ್ದು ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಕಳೆದ 20 ದಿನಗಳಿಂದಲೂ ಸೌಮಿತ್ರ ಚಟರ್ಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳು ಅವರಿಗೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.