ADVERTISEMENT

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 1 ರಿಂದ: CM ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಜನವರಿ 2025, 13:46 IST
Last Updated 6 ಜನವರಿ 2025, 13:46 IST
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ   

ಬೆಂಗಳೂರು: 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 1 ರಿಂದ 8 ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.

ಮುಖ್ಯಮಂತ್ರಿಯವರ ಗೃಹಕಚೇರಿ ‘ಕೃಷ್ಣಾ’ದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದರು.

ಈ ಸಾಲಿನ ಚಲನ ಚಿತ್ರೋತ್ಸವದ ಥೀಮ್‌ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಇರಲಿದೆ. ಕಳೆದ ಬಾರಿ ‘ಸಾಮಾಜಿಕ ನ್ಯಾಯ’ ಥೀಮ್ ಆಗಿತ್ತು. ಚಿತ್ರೋತ್ಸವಕ್ಕೆ ₹9 ಕೋಟಿ ಖರ್ಚು ಮಾಡಲಾಗುವುದು. ₹12 ಕೋಟಿ ಕೇಳಿದ್ದರು. ₹9 ಕೋಟಿ ಸಾಕು ಎಂದು ತೀರ್ಮಾನಿಸಲಾಯಿತು ಎಂದು ಅವರು ಹೇಳಿದರು.

ADVERTISEMENT

ಸುಮಾರು 60 ದೇಶಗಳು ಈ ಚಲನ ಚಿತ್ರೋತ್ಸವದಲ್ಲಿ ಭಾಗವಹಿಸಲಿದ್ದು, ಕನ್ನಡ ಸೇರಿ ವಿವಿಧ ಭಾಷೆಗಳ 200 ಚಲನ ಚಿತ್ರಗಳನ್ನು 13 ಚಿತ್ರಮಂದಿರಗಳಲ್ಲಿ 400 ಪ್ರದರ್ಶನಗೊಳ್ಳಲಿವೆ. ಬೆಂಗಳೂರು ಮತ್ತು ರಾಜ್ಯದ ನಾಗರಿಕರಿಗೆ ಅಂತರರಾಷ್ಟ್ರೀಯ ಚಲನಚಿತ್ರ ವೀಕ್ಷಿಸಲು, ಇದೊಂದು ಸುವರ್ಣ ಅವಕಾಶ ಎಂದು ಸಿದ್ದರಾಮಯ್ಯ ತಿಳಿಸಿದರು.

ಮಾರ್ಚ್‌ 1 ರಂದು ಚಲನಚಿತ್ರೋತ್ಸವ ಉದ್ಘಾಟನೆಗೊಳ್ಳಲಿದೆ. ಸೆಲೆಬ್ರಿಟಿ ಯಾರನ್ನು ಕರೆಸಬೇಕು ಎಂಬುದನ್ನು ಸಮಿತಿ ತೀರ್ಮಾನಿಸಲಿದೆ. ಈ ಉತ್ಸವಕ್ಕೆ ರಾಯಭಾರಿ ಯಾರು ಎನ್ನುವುದನ್ನೂ ಸಮಿತಿಯೇ ತೀರ್ಮಾನಿಸುತ್ತದೆ. ಸುಮಾರು ಒಂದು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.