
ವಿನಯ್ ರಾಜ್‌ಕುಮಾರ್ ನಟಿಸಿದ್ದ ‘ಪೆಪೆ’ ಸಿನಿಮಾ ನಿರ್ದೇಶಕ ಶ್ರೀಲೇಶ್ ಎಸ್.ನಾಯರ್ ನಿರ್ದೇಶನದ ಹೊಸ ಸಿನಿಮಾ ‘ಬೆನ್ನಿ’ ಪೋಸ್ಟರ್ ಬಿಡುಗಡೆಯಾಗಿದೆ.
‘ಬೆನ್ನಿ’ ಸಿನಿಮಾ ಮೂಲಕ ಮಹಿಳಾ ಪ್ರಧಾನ ಕಥೆಯನ್ನು ಹೇಳುವುದಕ್ಕೆ ಶ್ರೀಲೇಶ್ ಸಜ್ಜಾಗಿದ್ದಾರೆ. ಬಹುಭಾಷಾ ನಟಿ, ಕನ್ನಡದ ‘ನಂದ ಲವ್ಸ್ ನಂದಿತಾ’ ಸಿನಿಮಾದ ನಾಯಕಿಯಾಗಿದ್ದ ನಂದಿತಾ ಶ್ವೇತಾ ಈ ಚಿತ್ರದ ನಾಯಕಿಯಾಗಿದ್ದಾರೆ. ನಂದಿತಾ ಈ ಪೋಸ್ಟರ್‌ನಲ್ಲಿ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
‘ಬೆನ್ನಿ’ ಚಿತ್ರದಲ್ಲಿ ದಕ್ಷಿಣದ ಭಾರತದ ಪ್ರಮುಖ ನಟರು ಅಭಿನಯಿಸಲಿದ್ದಾರೆ ಎಂದಿದೆ ಚಿತ್ರತಂಡ. ಕನ್ನಡ ಮಾತ್ರವಲ್ಲ ತೆಲುಗು, ತಮಿಳು ಹಾಗೂ ಮಲಯಾಳದಲ್ಲಿ ಈ ಚಿತ್ರ ಮೂಡಿಬರಲಿದೆ. ಸಂಡೇ ಸಿನಿಮಾಸ್ ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್ ಈ ಚಿತ್ರವನ್ನು ನಿರ್ಮಿಸಿ ಪ್ರಸ್ತುತಪಡಿಸುತ್ತಿದ್ದಾರೆ. ಸಚಿನ್ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ಗುರುಪ್ರಸಾದ್ ನಾರ್ನಾಡ್ ಛಾಯಾಚಿತ್ರಗ್ರಹಣ, ಮನು ಶೇಡ್ಗಾರ್ ಹಾಗೂ ರಂಜನ್ ನರಸಿಂಹಮೂರ್ತಿ ಸಂಕಲನ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.