
ಬೆಟ್ಟದಪುರ: ಗ್ರಂಥಾಲಯಗಳು ಕೇವಲ ಪುಸ್ತಕಗಳ ಸಂಗ್ರಹಾಲಯಗಳಲ್ಲ, ಅವು ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಮೂಲಾಧಾರವಾಗಿವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜಶೇಖರ್ ತಿಳಿಸಿದರು.
ಗ್ರಾಮದ ಗ್ರಂಥಾಲಯದಲ್ಲಿ ಗುರುವಾರ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಗ್ರಂಥಾಲಯಗಳು ಮಕ್ಕಳ ಮತ್ತು ಯುವಕರ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ವಿವಿಧ ವಿಷಯಗಳ ಮತ್ತು ಪ್ರಕಾರಗಳ ಪುಸ್ತಕಗಳು ಉಚಿತವಾಗಿ ಲಭ್ಯವಿರುವುದರಿಂದ, ಚಿಕ್ಕ ವಯಸ್ಸಿನಲ್ಲಿಯೇ ಓದುವ ಆಸಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಭದ್ರವಾದ ಶೈಕ್ಷಣಿಕ ಅಡಿಪಾಯವನ್ನು ನೀಡುತ್ತದೆ ಎಂದರು.
ಮೇಲ್ವಿಚಾರಕ ಮೈಲಾರಿ ಮಾತನಾಡಿ, ಪ್ರತಿಯೊಬ್ಬರಿಗೂ ಗುಣಮಟ್ಟದ ಪುಸ್ತಕಗಳು, ಪತ್ರಿಕೆಗಳು, ಮತ್ತು ಡಿಜಿಟಲ್ ಸಂಪನ್ಮೂಲಗಳು ಗ್ರಂಥಾಲಯದಲ್ಲಿ ಲಭ್ಯವಿದೆ. ಇಲ್ಲಿ ಸಮಾನ ಶೈಕ್ಷಣಿಕ ಅವಕಾಶವನ್ನು ಒದಗಿಸಿಕೊಡಲಾಗುತ್ತದೆ. ಎಲ್ಲಾ ಯುವಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶಂಕರ್, ಗಿರಿಗೌಡ, ರೋಜಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಎಚ್. ಡಿ, ಕಾರ್ಯದರ್ಶಿ ಪಾಂಡು, ಸಿಬ್ಬಂದಿ ಶ್ರೀನಿಧಿ, ದೀಪು, ಅಣ್ಣೇಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.