ನಟ ಕಿಶೋರ್ ಕುಮಾರ್ ಜಿ.
ಬೆಂಗಳೂರು: 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಜಭಾರಿಯನ್ನಾಗಿ ಖ್ಯಾತ ನಟ ಕಿಶೋರ್ ಕುಮಾರ್ ಜಿ. ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಕಿಶೋರ್ ಅವರು ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲ ಭಾಷೆಗಳಲ್ಲಿಯೂ ನಟಿಸಿ ಜನಪ್ರಿಯತೆ ಗಳಿಸಿದ್ದಾರೆ. ಮಾರ್ಚ್ 1 ರಿಂದ 8 ರವರೆಗೆ ಬೆಂಗಳೂರಿನಲ್ಲಿ ನಡೆಯುವ ಚಿತ್ರೋತ್ಸವಕ್ಕೆ ಹೆಚ್ಚಿನ ಪ್ರಚಾರ ತಂದುಕೊಡುವ ಸಲುವಾಗಿ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.
ಈ ಸಾಲಿನ ಚಲನ ಚಿತ್ರೋತ್ಸವವು 'ಸರ್ವ ಜನಾಂಗದ ಶಾಂತಿಯ ತೋಟ' ಶೀರ್ಷಿಕೆಯಡಿ ನಡೆಯಲಿದೆ.
ಸುಮಾರು 60 ದೇಶಗಳ ಸಿನಿಮಾಗಳು, ಚಿತ್ರೋತ್ಸವದಲ್ಲಿ ಭಾಗವಹಿಸಲಿವೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ 200 ಚಲನಚಿತ್ರಗಳು 13 ಚಿತ್ರಮಂದಿರಗಳಲ್ಲಿ 400 ಪ್ರದರ್ಶನಗೊಳ್ಳಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.