ಈ ಹಿಂದೆ ‘ಶಂಭೋ ಶಿವಶಂಕರ’ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶಿಸಿರುವ ‘ಬಿಂಗೊ’ ಶೀಘ್ರದಲ್ಲಿ ತೆರೆಗೆ ಬರಲಿದೆ. ಆರ್.ಕೆ.ಚಂದನ್ ಹಾಗೂ ರಾಗಿಣಿ ದ್ವಿವೇದಿ ಜೋಡಿಯಾಗಿ ನಟಿಸಿದ್ದಾರೆ.
‘ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯಗೊಂಡಿವೆ. ಆಡಿಯೊ ಹಕ್ಕು ಕೂಡ ಮಾರಾಟಗೊಂಡಿದ್ದು, ಸದ್ಯದಲ್ಲೇ ಹಾಡುಗಳನ್ನು ಬಿಡುಗಡೆಗೊಳಿಸುತ್ತೇವೆ’ ಎಂದಿದ್ದಾರೆ ನಿರ್ದೇಶಕರು.
ಹಿತನ್ ಹಾಸನ್ ಸಂಗೀತ ನೀಡಿದ್ದು, ಮೂರು ಹಾಡುಗಳಿವೆ. ಆರ್.ಕೆ ಸ್ಟುಡಿಯೊಸ್ ಮತ್ತು ಮುತರಾ ವೆಂಚರ್ಸ್ ಚಿತ್ರವನ್ನು ನಿರ್ಮಿಸಿದೆ. ರಾಜೇಶ್ ನಟರಂಗ, ಪವನ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಟರಾಜ್ ಮುದ್ದಾಲ್ ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.