
ಅರವಿಂದ್ ಅಯ್ಯರ್-ಸಿರಿ ರವಿಕುಮಾರ್ ಜೋಡಿಯ ಹೊಸ ಸಿನಿಮಾ ‘ಬಿಸಿಬಿಸಿ Ice-Cream’ ಟ್ರೈಲರ್ ಬಿಡುಗಡೆಯಾಗಿದೆ.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ‘ಪ್ರೇರಣಾ’ ಎಂಬ ಪಾತ್ರದಲ್ಲಿ ಮಿಂಚಿದ್ದ ಸಿರಿ, ಮತ್ತೊಂದು ಭಿನ್ನ ಪಾತ್ರದಲ್ಲಿ ತೆರೆಗೆ ಬರುತ್ತಿದ್ದಾರೆ. ‘ಕಹಿ’, ‘ಅಳಿದು ಉಳಿದವರು’ ಸಿನಿಮಾ ನಿರ್ದೇಶಿಸಿದ್ದ ಅರವಿಂದ್ ಶಾಸ್ತ್ರಿ ಈ ವಿಭಿನ್ನ ಶೀರ್ಷಿಕೆ ಇರುವ ಸಿನಿಮಾ ನಿರ್ದೇಶಿಸಿದ್ದಾರೆ. ‘ಕ್ಯಾಬ್ ಡ್ರೈವರ್ ವೃತ್ತಿ ಬಗ್ಗೆ ನಾವು ಹೇಳಲು ಹೊರಟಿಲ್ಲ. ಆ ವ್ಯಕ್ತಿಯ ಕಥೆಯನ್ನು ನಾವು ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ. ಒಬ್ಬ ಒಂಟಿ ಕ್ಯಾಬ್ ಚಾಲಕನ ಜೀವನದಲ್ಲಿ ಮಿಸ್ಟೀರಿಯಸ್ ಹುಡುಗಿ ಬಂದಾಗ ಏನಾಗುತ್ತದೆ ಎನ್ನುವುದೇ ಸಿನಿಮಾದ ಕಥೆ. ಮಾರ್ಚ್ ತಿಂಗಳಲ್ಲಿ ಸಿನಿಮಾ ರಿಲೀಸ್ ಮಾಡುತ್ತೇವೆ’ ಎಂದರು ಅರವಿಂದ್.
ಕಾಮಿಡಿ, ಥ್ರಿಲ್ಲರ್, ಅಡ್ವೆಂಚರ್ ಎಲ್ಲವೂ ಕಥೆಯಲ್ಲಿ ಇದೆ. ‘ಕ್ಯಾಬ್ ಚಾಲಕರ ಕಥೆ ಹೇಳುವ ಸಿನಿಮಾಗಳು ಈಗಾಗಲೇ ಬಂದಿವೆ. ಆದರೆ ‘ಬಿಸಿಬಿಸಿ Ice-Cream’, ಅನಾರೋಗ್ಯದಲ್ಲಿರುವ ಕ್ಯಾಬ್ ಚಾಲಕನ ಜೀವನದ ಸುತ್ತ ಹೆಣೆಯಲಾಗಿದೆ. ಕಥೆ ಬರೆದು ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ಸಂಕಲನದ ಜವಾಬ್ದಾರಿಯನ್ನೂ ಅರವಿಂದ್ ಹೊತ್ತಿದ್ದಾರೆ. ಡಾರ್ಕ್ ಕಾಮಿಡಿ ರೊಮ್ಯಾನ್ಸ್ ಕಥಾಹಂದರದ ಈ ಚಿತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಅವರೂ ಬಣ್ಣಹಚ್ಚಿದ್ದಾರೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ, ಎನೋಷ್ ಒಲಿವೇರಾ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.