ಇನ್‌ಸ್ಟಾಗ್ರಾಮ್
ಮುಂಬೈ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಕುಟುಂಬದವರನ್ನು ಬಿಜೆಪಿ ಶಾಸಕ ಆಶಿಶ್ ಶೆಲಾರ್ ಭೇಟಿ ಮಾಡಿ, ನಿರ್ಗತಿಕರಿಗೆ ನೆರವು, ಆರೋಗ್ಯ ಕ್ಷೇತ್ರ ಸೇರಿದಂತೆ ಅವರ ಕುಟುಂಬ ಮಾಡುತ್ತಿರುವ ಸಾಮಾಜಿಕ ಕಾರ್ಯಗಳ ಕುರಿತಂತೆ ಚರ್ಚಿಸಿದ್ದಾರೆ.
ಸಲ್ಮಾನ್ ಖಾನ್ ಮತ್ತು ಅವರ ಕುಟುಂಬದವರನ್ನು ಭೇಟಿಯಾದ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಆಶಿಶ್ ಶೆಲಾರ್ ಹಂಚಿಕೊಂಡಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನಾ ಬಿಜೆಪಿ ಶಾಸಕ ಆಶಿಶ್ ಶೆಲಾರ್ (ಬಾಂದ್ರಾ, ಪಶ್ಚಿಮ) ಸಲ್ಮಾನ್ ಖಾನ್ ಹಾಗೂ ಅವರ ತಂದೆ ಸಲೀಂ ಖಾನ್ ಅವರನ್ನು ಭೇಟಿ ಮಾಡಿ, ನಿರ್ಗತಿಕರಿಗೆ ನೆರವು, ಆರೋಗ್ಯ ಕ್ಷೇತ್ರ ಸೇರಿದಂತೆ ಅವರ ಕುಟುಂಬ ಮಾಡುತ್ತಿರುವ ಸಾಮಾಜಿಕ ಕಾರ್ಯಗಳ ಕುರಿತಂತೆ ಚರ್ಚಿಸಿದ್ದಾರೆ.
‘ಸಲ್ಮಾನ್ ಖಾನ್ ಕುಟುಂಬವು ಎರಡು ದಶಕಗಳಿಂದಲೂ ಅತ್ಯಂತ ಪ್ರಾಮಾಣಿಕವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದ ಮೂಲಕ ಅನೇಕ ಜನರಿಗೆ ನೆರವಿನ ಹಸ್ತ ಚಾಚಿದೆ. ಇಂತಹ ಕುಟುಂಬದೊಂದಿಗೆ ಸಮಯ ಕಳೆದಿದ್ದು ಬಹಳ ಸಂತಸ ತಂದಿದೆ‘ ಎಂದು ಶೆಲಾರ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಮುಂಬೈನ 6 ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಮತದಾನ ನಡೆಯಲಿದೆ. ಮಹಾರಾಷ್ಟ್ರವು ಒಟ್ಟು 48 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.