ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರ ಕೈಗೆ ಗಾಯವಾಗಿದ್ದು, ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿಷೇಕ್ ಅವರನ್ನು ತಂದೆ ಅಮಿತಾಬ್ ಬಚ್ಚನ್ ಹಾಗೂ ಸಹೋದರಿ ಶ್ವೇತಾ ಬಚ್ಚನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇತ್ತೀಚೆಗೆ ಅಭಿಷೇಕ್, ಮಣಿರತ್ನಂ ನಿರ್ದೇಶನದ ಸಿನಿಮಾ ಚಿತ್ರೀಕರಣಕ್ಕಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದರು. ಇದೇ ವೇಳೆ ಅವರ ಪತ್ನಿ ಐಶ್ವರ್ಯ ರೈ ಬಚ್ಚನ್ ಹಾಗೂ ಮಗಳು ಆರಾಧ್ಯ ಅವರೊಂದಿಗೆ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದರು.
ಅಭಿಷೇಕ್, ಬಾಬ್ ಬಿಸ್ವಾಸ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.