
ಪಿಟಿಐ
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
89 ವರ್ಷದ ಧರ್ಮೇಂದ್ರ ಅವರು ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಧರ್ಮಜೀ ಅವರ ಆರೋಗ್ಯ ಉತ್ತಮ ಸ್ಥಿತಿಯಲ್ಲಿಲ್ಲ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ವ್ಯಕ್ತಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಆದರೆ ಅವರ ಮಗ ಸನ್ನಿ ದೇವಲ್ ಅವರ ಪ್ರತಿನಿಧಿ, ಧರ್ಮೇಂದ್ರ ಅವರು ವೆಂಟಿಲೇಟರ್‌ನಲ್ಲಿದ್ದಾರೆ ಎನ್ನುವ ವರದಿಯನ್ನು ಅಲ್ಲಗಳೆದಿದ್ದಾರೆ. ಜತೆಗೆ ‘ಅವರು ಇನ್ನೂ ಆಸ್ಪತ್ರೆಯಲ್ಲಿದ್ದಾರೆ, ಮನೆಗೆ ತೆರಳಲು ವೈದ್ಯರು ಸೂಚಿಸಿಲ್ಲ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.