
ಮುಂಬೈ: ಬಾಲಿವುಡ್‌ನ ಹಿರಿಯ ನಟ ಗೋವಿಂದ ಅವರು ಮಧ್ಯರಾತ್ರಿ ಮನೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಜುಹುವಿನ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕಾನೂನು ಸಲಹೆಗಾರ ಮತ್ತು ಸ್ನೇಹಿತ ಲಲಿತ್ ಬಿಂದಾಲ್ ಮಾಹಿತಿ ನೀಡಿದ್ದಾರೆ.
ಗೋವಿಂದ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಬಿಂದಾಲ್, ‘ಅವರು ತಮ್ಮ ನಿವಾಸದಲ್ಲಿ ಸಂಜೆ ವೇಳೆಗೆ ಮೂರ್ಛೆ ಹೋಗಿದ್ದರು. ಕೂಡಲೆ ನನಗೆ ಕರೆ ಮಾಡಿದರು. ನಾನು ಅವರನ್ನು ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಿದ್ದೇನೆ. ಸದ್ಯ ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಹಾಗೂ ಕೆಲವು ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ’ ಎಂದು ಬಿಂದಾಲ್ ಪಿಟಿಐಗೆ ತಿಳಿಸಿದರು.
ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲೂ ಗೋವಿಂದ ಅವರ ಆರೋಗ್ಯದ ಮಾಹಿತಿ ಹಂಚಿಕೊಂಡಿದ್ದಾರೆ. ‘ನನ್ನ ಪ್ರೀತಿಯ ಗೋವಿಂದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಶೀಘ್ರದಲ್ಲಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.