ADVERTISEMENT

ಚಾಕು ಇರಿತ ಪ್ರಕರಣ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜನವರಿ 2025, 9:55 IST
Last Updated 21 ಜನವರಿ 2025, 9:55 IST
ಸೈಫ್ ಅಲಿ ಖಾನ್
ಸೈಫ್ ಅಲಿ ಖಾನ್   

ಮುಂಬೈ: ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಅವರು ಇಂದು (ಮಂಗಳವಾರ) ಮಧ್ಯಾಹ್ನ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜ.16ರಂದು ಮುಂಬೈನ ಬಾಂದ್ರಾದಲ್ಲಿರುವ ‘ಸದ್ಗುರು ಶರಣ್’ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಲ್ಲಿರುವ ನಿವಾಸದಲ್ಲಿ 54 ವರ್ಷದ ಸೈಫ್ ಅಲಿ ಖಾನ್ ದುಷ್ಕರ್ಮಿಯೊಬ್ಬರಿಂದ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಸೈಫ್‌ ಅವರ ಬೆನ್ನೆಲುಬಿಗೆ ಗಂಭೀರ ಗಾಯವಾಗಿದ್ದು, ಅಲ್ಲಿ ಹೊಕ್ಕಿದ್ದ ಚಾಕು ಹೊರತೆಗೆಯಲು ಮತ್ತು ಬೆನ್ನುಮೂಳೆಯ ಮಜ್ಜೆಯನ್ನು ಸರಿಪಡಿಸಲು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಸೈಫ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು’ ಎಂದು ಲೀಲಾವತಿ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ.ನಿತಿನ್‌ ಡಾಂಗೆ ಹೇಳಿದ್ದಾರೆ.

ADVERTISEMENT

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾಂಗ್ಲಾ ಮೂಲದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಸೈಫ್ ಅವರ ನಿವಾಸಕ್ಕೆ ಶೆಹಜಾದ್ ಕಳ್ಳತನದ ಉದ್ದೇಶದಿಂದ ಪ್ರವೇಶಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.