
ಸಾನ್ವಿ ಸುದೀಪ್, ಸುದೀಪ್, ಸಲ್ಮಾನ್ ಖಾನ್
ಚಿತ್ರ: ಇನ್‌ಸ್ಟಾಗ್ರಾಂ
ಕಳೆದ ವರ್ಷಾಂತ್ಯಕ್ಕೆ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಯಾಗಿ ಸುದ್ದಿ ಮಾಡಿತ್ತು. ಇದೇ ಸಿನಿಮಾದ ‘ಮಸ್ತ್ ಮಲೈಕಾ’ ಹಾಡು ಸಿಕ್ಕಾಪಟ್ಟೆ ಹರಿದಾಡಿತ್ತು. ಯೂಟ್ಯೂಬ್‌ನಲ್ಲಿ ಈ ಹಾಡು ಈವರೆಗೆ 3.3 ಕೋಟಿ ವೀಕ್ಷಣೆ ಪಡೆದುಕೊಂಡಿದೆ. ಅಷ್ಟರ ಮಟ್ಟಿಗೆ ಈ ಹಾಡು ಜನಪ್ರಿಯತೆ ಪಡೆದುಕೊಂಡಿದೆ.
ಸಲ್ಮಾನ್ ಖಾನ್ ಇನ್‌ಸ್ಟಾಗ್ರಾಂ ಪೋಸ್ಟ್
ವಿಶೇಷ ಏನೆಂದರೆ ಮಸ್ತ್ ಮಲೈಕಾ ಹಾಡನ್ನು ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸುದೀಪ್ ಹಾಡಿದ್ದಾರೆ. ಇದೀಗ ಸಾನ್ವಿ ಅವರ ಕಂಠದಲ್ಲಿ ಮೂಡಿಬಂದ ಈ ಹಾಡಿಗೆ ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರು ಮೆಚ್ಚುಗೆ ಸೂಚಿಸಿದ್ದಾರೆ. ‘ಮಸ್ತ್ ಮಲೈಕಾ’ ಹಾಡಿನ ಲಿಂಕ್ ಅನ್ನು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದಾರೆ ಸಲ್ಮಾನ್ ಖಾನ್. ‘ಸುಂದರವಾದ ಹಾಡು, ಒಳ್ಳೆಯದಾಗಲಿ’ ಎಂದು ಬರೆದುಕೊಂಡಿದ್ದಾರೆ. ಈ ಸ್ಟೋರಿಯಲ್ಲಿ ಕಿಚ್ಚ ಸುದೀಪ್ ಹಾಗೂ ಸಾನ್ವಿಯನ್ನು ಟ್ಯಾಗ್ ಮಾಡಿದ್ದಾರೆ.
ಸಾನ್ವಿ ಸುದೀಪ್
ಇದೇ ಪೋಸ್ಟ್ ಗಮನಿಸಿದ ಸಾನ್ವಿ ಸುದೀಪ್ ‘ಎಂತಹ ಅದ್ಭುತ ಗೌರವ. ಧನ್ಯವಾದಗಳು ಸಲ್ಮಾನ್ ಸರ್’ ಎಂದು ತಮ್ಮ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅವರ ಜೊತೆಗೆ ನಟ ಸುದೀಪ್ ‘ದಬಾಂಗ್ 3’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಸದ್ಯ ನಟ ಸಲ್ಮಾನ್ ಖಾನ್ ಅವರು ‘ಗಾಲ್ವಾನ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.