ADVERTISEMENT

ಹೋಟೆಲ್‌ ನಿರ್ಮಾಣ ವಿವಾದ: ಸುಪ್ರೀಂಗೆ ಸಲ್ಲಿಸಿದ್ದ ಮೇಲ್ಮನವಿ ಹಿಂಪಡೆದ ಸೋನು ಸೂದ್

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 8:23 IST
Last Updated 5 ಫೆಬ್ರುವರಿ 2021, 8:23 IST
   

ನವದೆಹಲಿ: ತಮ್ಮ ವಸತಿ ಕಟ್ಟಡ ವಿವಾದಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಬಾಲಿವುಡ್‌ ನಟ ಸೋನು ಸೂದ್‌ ಮೇಲ್ಮನವಿಯನ್ನು ಹಿಂಪಡೆದಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆನೇತೃತ್ವದ ತ್ರಿ ಸದಸ್ಯ ಪೀಠ ಸೂದ್‌ ತಮ್ಮ ಅರ್ಜಿ ಹಿಂಪಡೆಯಲು ಅನುವು ಮಾಡಿಕೊಟ್ಟಿದೆ.

ಜುಹೂ ಪ್ರದೇಶದಲ್ಲಿ ವಸತಿ ಕಟ್ಟಡವೊಂದನ್ನು ಅನುಮತಿ ಪಡೆಯದೆ ಹೋಟೆಲ್‌ ಆಗಿ ಪರಿವರ್ತಿಸಿದ ಆರೋಪದಡಿ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯು (ಬಿಎಂಸಿ) ಸೂದ್‌ ಅವರಿಗೆ ನೋಟಿಸ್‌ ಕಳುಹಿಸಿತ್ತು. ಇದನ್ನು ರದ್ದುಗೊಳಿಸಬೇಕು ಎಂದು ಕೋರಿ ಅವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಆದರೆ ಬಾಂಬೆ ಹೈಕೋರ್ಟ್‌ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.