ADVERTISEMENT

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿಕೊಂಡ ಬಾಲಿವುಡ್‌ ನಟಿ ನುಶ್ರತ್‌ ಭರುಚಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2023, 4:56 IST
Last Updated 8 ಅಕ್ಟೋಬರ್ 2023, 4:56 IST
<div class="paragraphs"><p>ನುಶ್ರತ್‌ ಭರುಚಾ</p></div>

ನುಶ್ರತ್‌ ಭರುಚಾ

   

ಚಿತ್ರ:Insta/nushrrattbharuccha

ಹೈಫಾ: ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಬಾಲಿವುಡ್‌ ನಟಿ ನುಶ್ರತ್‌ ಭರುಚಾ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

‘39ನೇ ಹೈಫಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ನುಶ್ರತ್‌ ಇಸ್ರೇಲ್‌ಗೆ ತೆರಳಿದ್ದು, ದುರದೃಷ್ಟವಶಾತ್ ಯುದ್ಧ ಪೀಡಿತ ನೆಲದಲ್ಲಿ ಸಿಲುಕಿಕೊಂಡಿದ್ದಾರೆ. ನಮ್ಮ ಸಂಪರ್ಕಕ್ಕೂ ಸಿಗುತ್ತಿಲ್ಲ’ ಎಂದು ಅವರ ತಂಡದ ಸದಸ್ಯರೊಬ್ಬರು ಹೇಳಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

‘ಮಧ್ಯಾಹ್ನ 12.30ರ ಹೊತ್ತಿಗೆ ನಾವು ಅವರನ್ನು ಸಂಪರ್ಕಿಸಿದೆವು. ನೆಳಮಾಳಿಗೆಯಲ್ಲಿ ರಕ್ಷಣೆ ಪಡೆದಿರುವುದಾಗಿ ತಿಳಿಸಿದ್ದರು. ಇದಾದ ಬಳಿಕ ಅವರನ್ನು ಸಂಪರ್ಕಿಸಲು ನಮಗೆ ಸಾಧ್ಯವಾಗಲಿಲ್ಲ. ನುಶ್ರತ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿಸಲು ಪ್ರಯತ್ನಿಸುತ್ತಿದ್ದೇವೆ’ ಎಂದು ಹೇಳಿದ್ದಾರೆ.

ನುಶ್ರತ್‌ ನಟನೆಯ ‘ಅಕೆಲ್ಲಿ’ ಚಿತ್ರ ಹೈಫಾ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿತ್ತು.

ಶನಿವಾರ ಪ್ಯಾಲೆಸ್ಟೀನ್‌ನ ಹಮಾಸ್‌ ಬಂಡುಕೋರರು ಗಾಜಾ ಪಟ್ಟಿಯಿಂದ ಇಸ್ರೇಲ್‌ ಮೇಲೆ ದಿಢೀರ್‌ ರಾಕೆಟ್‌ ದಾಳಿ ನಡೆಸಿದ್ದರು. ಇದರಿಂದ ಕೆರಳಿದ ಇಸ್ರೇಲ್‌, ಹಮಾಸ್‌ ವಿರುದ್ಧ ಯುದ್ಧ ಘೋಷಣೆ ಮಾಡಿತ್ತು. ದಾಳಿ–ಪ್ರತಿದಾಳಿಯಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.