'ಪರಮ್ ಸುಂದರಿ' ಸಿನಿಮಾ ಪ್ರಚಾರದ ವೇಳೆ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಜಾಹ್ನವಿ ಕಪೂರ್ ಅವರು ಕ್ಯಾಮೆರಾಗೆ ಪೋಸ್ ನೀಡಿದ್ದು ಹೀಗೆ..
ಮುಂಬೈ: ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ನಟಿ ಜಾಹ್ನವಿ ಕಪೂರ್ ಅಭಿನಯದ ‘ಪರಮ್ ಸುಂದರಿ‘ ಚಿತ್ರ ಬಿಡುಗಡೆಯಾದ ಎರಡು ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ₹28.7 ಕೋಟಿ ಗಳಿಕೆ ಕಂಡಿದೆ.
ದೇಶಿಯ ಬಾಕ್ಸ್ ಆಫೀಸ್‌ನಲ್ಲಿ ಸುಮಾರು ₹20 ಕೋಟಿ ಗಳಿಕೆ ಕಂಡಿದೆ ಎಂದು ವರದಿಯಾಗಿದೆ.
ಆಗಸ್ಟ್ 29ರಂದು ಬಿಡುಗಡೆಯಾಗಿದ್ದ ಈ ಚಿತ್ರ ಮೊದಲ ದಿನ ದೇಶಿಯ ಬಾಕ್ಸ್ ಆಫೀಸ್‌ನಲ್ಲಿ ₹7.37 ಕೋಟಿ ಗಳಿಸಿತ್ತು ಎಂದು ಚಿತ್ರ ತಯಾರಾಕರು ತಿಳಿಸಿದ್ದರು.
ಮ್ಯಾಡಾಕ್ ಫಿಲ್ಮ್ಸ್ ಬ್ಯಾನರ್ ಅಡಿ ನಿರ್ಮಿಸಲಾಗಿದ್ದು, ಈ ಚಿತ್ರಕ್ಕೆ ‘ದಾಸ್ವಿ‘ ಖ್ಯಾತಿಯ ತುಷಾರ್ ಜಲೋಟಾ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ, ಈ ಚಿತ್ರದಲ್ಲಿ ಪ್ರೇಮಕಥೆ ಜತೆಗೆ ಸಂಘರ್ಷವೂ ಇದ್ದು, ಚಿತ್ರ ವಿಭಿನ್ನವಾಗಿ ಮೂಡಿಬಂದಿದೆ. ಕೇರಳ ಸೇರಿದಂತೆ ವಿವಿಧ ಕಡೆ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ತಿಳಿಸಿತ್ತು.
ಜಾಹ್ನವಿ ಕಪೂರ್, ಮುಂಬರುವ ಚಿತ್ರ 'ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ' ನಲ್ಲಿ ವರುಣ್ ಧವನ್ ಜತೆ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಅಕ್ಟೋಬರ್ 2ರಂದು ಬಿಡುಗಡೆಯಾಗಲಿದೆ.
ಜೂನಿಯರ್ ಎನ್‌ಟಿಆರ್ ಜತೆಯಾಗಿ ‘ದೇವರ’ ಚಿತ್ರದ ಮೂಲಕ ನಟಿ ಜಾಹ್ನವಿ ಕಪೂರ್ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರಕ್ಕೆ ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.