ADVERTISEMENT

'ಪರಮ್–ಸುಂದರಿ' ಆಗಿ ಸಿದ್ಧಾರ್ಥ್ ಮಲ್ಹೋತ್ರಾ, ಜಾಹ್ನವಿ : ಆಗಸ್ಟ್‌ನಲ್ಲಿ ತೆರೆಗೆ

ಪಿಟಿಐ
Published 13 ಜುಲೈ 2025, 7:34 IST
Last Updated 13 ಜುಲೈ 2025, 7:34 IST
<div class="paragraphs"><p>ಎಕ್ಸ್‌ ಖಾತೆ:&nbsp;@MaddockFilms</p></div>
   

ಎಕ್ಸ್‌ ಖಾತೆ: @MaddockFilms

ಮುಂಬೈ: ಬಾಲಿವುಡ್‌ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಜಾಹ್ನವಿ ಕಪೂರ್ ಅಭಿನಯದ ‘ಪರಮ್ ಸುಂದರಿ‘ ಚಿತ್ರ ಆಗಸ್ಟ್‌ನಲ್ಲಿ ವಿಶ್ವದಾದ್ಯಂತ ತೆರೆ ಮೇಲೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಈ ಚಿತ್ರ ಜುಲೈ 25ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಸ್ಟ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಆದರೆ ನಿರ್ದಿಷ್ಟ ದಿನಾಂಕವನ್ನು ಖಚಿತ ಪಡಿಸಿಲ್ಲ.

ADVERTISEMENT

ಈ ಚಿತ್ರದಲ್ಲಿ ಪರಮ್‌ ಆಗಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಸುಂದರಿ ಆಗಿ ಜಾಹ್ನವಿ ಕಪೂರ್ ಕಾಣಿಸಿಕೊಳ್ಳಲಿದ್ದಾರೆ.

‘ದಸ್ವಿ‘ ಖ್ಯಾತಿಯ ತುಷಾರ್ ಜಲೋಟಾ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್‌ ಹೇಳಿದ್ದಾರೆ, ಈ ಚಿತ್ರದಲ್ಲಿ ಪ್ರೇಮಕಥೆ ಜತೆಗೆ ಸಂಘರ್ಷವೂ ಇರಲಿದ್ದು, ಚಿತ್ರ ವಿಭಿನ್ನವಾಗಿ ಮೂಡಿಬರಲಿದೆ. ಕೇರಳ ಸೇರಿದಂತೆ ವಿವಿಧ ಕಡೆ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ತಿಳಿಸಿದೆ.

ಮಲ್ಹೋತ್ರಾ, ಮುಂಬರುವ 'ವಿವಿಎಎನ್ - ಫೋರ್ಸ್ ಆಫ್ ದಿ ಫಾರೆಸ್ಟ್' ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜಾಹ್ನವಿ ಕಪೂರ್‌, ಮುಂಬರುವ ಚಿತ್ರ ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ'ನಲ್ಲಿ ವರುಣ್ ಧವನ್‌ ಜತೆ ಕಾಣಿಸಿಕೊಳ್ಳಲಿದ್ದಾರೆ.

ಜೂನಿಯರ್ ಎನ್‌ಟಿಆರ್‌ ಜತೆಯಾಗಿ ‘ದೇವರ’ ಚಿತ್ರದ ಮೂಲಕ ನಟಿ ಜಾಹ್ನವಿ ಕಪೂರ್ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರಕ್ಕೆ ತೆಲುಗು ಹಾಗೂ ಹಿಂದಿ ಭಾಷೆಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.