ಮುಂಬೈ: ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರು ನಟಿ ಶೆರ್ಲಿನ್ ಚೋಪ್ರಾ ಅವರಿಗೆ ₹ 50 ಕೋಟಿ ಮಾನನಷ್ಟ ಮೊಕದ್ದಮೆ ನೋಟಿಸ್ ಕಳುಹಿಸಿದ್ದಾರೆ.
ಸುಳ್ಳು ಮತ್ತು ಆಧಾರ ರಹಿತ ಆರೋಪ ಮಾಡುವ ಮೂಲಕ ತಮ್ಮ ಪ್ರತಿಷ್ಠೆಗೆ ಚ್ಯುತಿ ಉಂಟು ಮಾಡಿರುವ ಶೆರ್ಲಿನ್ ಅವರು ಕ್ಷಮೆ ಕೇಳಬೇಕು ಎಂದು ಶಿಲ್ಪಾ ಶೆಟ್ಟಿ ದಂಪತಿ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.
ಏಳು ದಿನಗಳೊಳಗೆ ಪ್ರಮುಖ ಪತ್ರಿಕೆ ಮತ್ತು ಡಿಜಿಟಲ್ ಮಾಧ್ಯಮಗಳ ಮೂಲಕ ಶೆರ್ಲಿನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು.ಶೆರ್ಲಿನ್ ಹಣ ವಸೂಲಿ ಮಾಡುವ ಉದ್ದೇಶದಿಂದ ಆರೋಪ ಮಾಡಿದ್ದು, ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕ್ಷಮೆ ಕೇಳದಿದ್ದರೆ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಶಿಲ್ಪಾ ಶೆಟ್ಟಿ ದಂಪತಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.