ಬೆಂಗಳೂರು: ಮಾರುತಿ ನಿರ್ದೇಶನದ, ನಟ ಪ್ರಭಾಸ್ ಅಭಿನಯದ ‘ದಿ ರಾಜಾ ಸಾಬ್’ ಚಿತ್ರವು 4 ದಿನಗಳಲ್ಲಿ ಬರೋಬ್ಬರಿ ₹201 ಕೋಟಿ ಗಳಿಸಿದೆ ಎಂದು ಚಿತ್ರತಂಡ ತಿಳಿಸಿದೆ.
ಜ.9ರಂದು ಬಿಡುಗಡೆಯಾಗಿರುವ ‘ದಿ ರಾಜಾ ಸಾಬ್’ ಚಿತ್ರದ ಬಾಕ್ಸ್ ಆಫೀಸ್ ಗಳಿಕೆಗೆ ಸಂಬಂಧಿಸಿದಂತೆ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
ಆ್ಯಕ್ಷನ್ ಸಿನಿಮಾಗಳಲ್ಲಿ ಮಿಂಚಿದ್ದ ಪ್ರಭಾಸ್, ಇದೇ ಮೊದಲ ಬಾರಿಗೆ ಹಾರರ್ ಜಾನರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ 8ರಂದು ಚಿತ್ರದ ಪ್ರೀಮಿಯರ್ ಶೋಗಳು ಪ್ರಾರಂಭವಾಗಿತ್ತು.
ಚಿತ್ರದಲ್ಲಿ ಪ್ರಭಾಸ್‌ಗೆ ನಾಯಕಿಯರಾಗಿ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ನಟಿಸಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಟಿ.ಜಿ. ವಿಶ್ವಪ್ರಸಾದ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬಂದಿದೆ.
ಬಿಗ್ ಬಜೆಟ್‌ನ ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಚಿತ್ರಗ್ರಹಣವಿದೆ. ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳ ಭಾಷೆಗಳಲ್ಲಿ ಈ ಚಿತ್ರ ರಿಲೀಸ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.