
ಕಿಚ್ಚ ಸುದೀಪ್
ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕ್ರಿಸ್‌ಮಸ್ ಬ್ಲಾಕ್ ಬಸ್ಟರ್‌ಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕ್ರಿಸ್‌ಮಸ್ ದಿನದಂದು ಬಿಡುಗಡೆಯಾದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಾರ್ಕ್ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿದೆ.
ಮಾರ್ಕ್ ಸಿನಿಮಾ ಮೊದಲ ವಾರಾಂತ್ಯದಲ್ಲಿಯೇ ₹35 ಕೋಟಿ ಗಳಿಸಿದೆ. ವಾರಾಂತ್ಯ ಮಾತ್ರವಲ್ಲದೆ ಸೋಮವಾರವೂ ಕಿಚ್ಚನ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.
ಹಿಂದಿ ಹಾಗೂ ಹಾಲಿವುಡ್ ಸಿನಿಮಾಗಳಿಗೆ ಟಕ್ಕರ್ ಕೊಟ್ಟು ದೊಡ್ಡ ಮಟ್ಟದ ಗೆಲುವನ್ನು ಕಿಚ್ಚನ ಸಿನಿಮಾ ಪಡೆದುಕೊಂಡಿದೆ.
ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು, ದಾವಣಗೆರೆ ಮತ್ತು ಚಾಮರಾಜನಗರದ ಹಲವು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ನಾಲ್ಕನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಂಡಿವೆ.
ಕಿಚ್ಚನ ಸ್ವಾಗ್, ಸ್ಟೈಲು, ಆಟಿಟ್ಯೂಡ್ ಕಂಡು ಸಿನಿ ರಸಿಕರು ಫಿದಾ ಆಗಿದ್ದಾರೆ. ಮ್ಯಾಕ್ಸ್ ಬಳಿಕ ಮತ್ತೊಮ್ಮೆ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಜೋಡಿ ಬೆಳ್ಳಿಪರದೆ ಮೇಲೆ ಮೋಡಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.