ಅಲ್ಲು ಅರ್ಜುನ್ ಬಂಧನ
ಪಿಟಿಐ ಚಿತ್ರ
ಹೈದರಾಬಾದ್: ಪುಷ್ಪ–2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟಾಲಿವುಡ್ ನಟ ಅಲ್ಲು ಅರ್ಜುನ್ ಬಂಧನವಬ್ಬು ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಖಂಡಿಸಿದ್ದಾರೆ.
ಯಾವುದೇ ಸೂಚನೆ ಇಲ್ಲದೆ ಅಲ್ಲು ಅರ್ಜುನ್ ಅವರನ್ನು ಬಂಧಿಸಿರುವುದು ಮತ್ತು ಸಾಮಾನ್ಯ ಕ್ರಿಮಿನಲ್‌ಗಳಂತೆ ನಡೆಸಿಕೊಂಡಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ ನಟನನ್ನು ಈ ರೀತಿ ಬಂಧಿಸಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಭದ್ರತೆಯನ್ನು ಪ್ರದರ್ಶಿಸಿದೆ ಎಂದು ಟೀಕಿಸಿದ್ದಾರೆ.
‘ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿರುವ ಬಗ್ಗೆ ಅತೀವ ದುಃಖವಿದೆ. ಇಲ್ಲಿ ನಿಜವಾಗಿಯೂ ಏನು ಲೋಪವಾಗಿದೆ? ಅಲ್ಲು ಅರ್ಜುನ್ ತಾವು ನೇರವಾಗಿ ಜವಾಬ್ದಾರರಲ್ಲದ ಪ್ರಕರಣದಲ್ಲಿ ಅವರನ್ನು ಒಬ್ಬ ಕ್ರಿಮಿನಲ್ ರೀತಿ ನಡೆಸಿಕೊಂಡಿರುವುದು ಸರಿ ಎಲ್ಲ’ ಎಂದು ಎಕ್ಸ್ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.
ಆರೋಪಿಗಳನ್ನು ನಡೆಸಿಕೊಳ್ಳುವಲ್ಲಿ ತೋರಬೇಕಾದ ಗೌರವದ ವಿಷಯದಲ್ಲಿ ಸರ್ಕಾರದ ನಡವಳಿಕೆಯನ್ನು ಖಂಡಿಸಿದ್ದಾರೆ.
ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ–2 ಚಿತ್ರದ ಪ್ರೀಮಿಯರ್ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.