ರಾಣಾ ದ್ಗುಬಾಟಿ, ವಿಜಯ್ ದೇವರಕೊಂಡ,ಪ್ರಕಾಶ್ ರಾಜ್, ಸೇರಿ 25 ಮಂದಿ ವಿರುದ್ಧ ಪ್ರಕರಣ
ಹೈದರಾಬಾದ್: ಬೆಟ್ಟಿಂಗ್ ಆ್ಯಪ್‌ಗಳ ಪರ ಪ್ರಚಾರ ಮಾಡಿದ ಆರೋಪದ ಮೇಲೆ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ನಟಿಯರಾದ ಮಂಚು ಲಕ್ಷ್ಮಿ, ಪ್ರಣೀತಾ, ನಿಧಿ ಅಗರ್‌ವಾಲ್ ಮತ್ತು 19 ಮಂದಿ ಇನ್‌ಪ್ಲುಯೆನ್ಸರ್‌ಗಳ ವಿರುದ್ಧ ತೆಲಂಗಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಟ, ನಟಿಯರಲ್ಲದೆ, ಸಾಮಾಜಿಕ ಜಾಲತಾಣಗಳ ಇನ್ಫ್ಲುಯೆನ್ಸರ್‌ಗಳಾದ ಅನನ್ಯಾ, ಶ್ರೀಮುಖ, ವರ್ಷಿಣಿ, ಸನ್ನಿ ಯಾದವ್ ಸೇರಿ ಹಲವರ ವಿರುದ್ಧ ಉದ್ಯಮಿಯೊಬ್ಬರು ಮಿಯಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಸೆಲೆಬ್ರಿಟಿಗಳು ಮತ್ತು ಪ್ರಭಾವಿಗಳು ಪಾಪ್-ಅಪ್ ಜಾಹೀರಾತುಗಳ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ.
‘ಬಿಎನ್ಎಸ್, ಗೇಮಿಂಗ್ ಕಾಯ್ದೆ ಮತ್ತು ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ
ಮಾರ್ಚ್ 19 ರಂದು ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ. ಎಫ್‌ಐಆರ್‌ನಲ್ಲಿ ಹೆಸರಿದ್ದವರಿಗೆ ನೋಟಿಸ್ ನೀಡಲು ಯೋಜಿಸುತ್ತಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.