ADVERTISEMENT

ದರ್ಶನ್ ಅಭಿನಯದ ‘ರಾಬರ್ಟ್‌’ ಸಿನಿಮಾಗೆ ಯು/ಎ ಪ್ರಮಾಣಪತ್ರ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 7:23 IST
Last Updated 4 ಮಾರ್ಚ್ 2021, 7:23 IST
ರಾಬರ್ಟ್‌ ಚಿತ್ರದಲ್ಲಿ ದರ್ಶನ್‌
ರಾಬರ್ಟ್‌ ಚಿತ್ರದಲ್ಲಿ ದರ್ಶನ್‌   

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್‌’ ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

ಮಾ.11ರಂದು ಚಿತ್ರವು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಏಕಕಾಲದಲ್ಲಿ ತೆರೆಯ ಮೇಲೆ ಬರುತ್ತಿದೆ. ಚಿತ್ರದ ಪ್ರಿರಿಲೀಸ್‌ ಕಾರ್ಯಕ್ರಮವು ಅದ್ಧೂರಿಯಾಗಿ ಹುಬ್ಬಳ್ಳಿ ಹಾಗೂ ಹೈದರಾಬಾದ್‌ನಲ್ಲಿ ನಡೆದಿದೆ. ಚಿತ್ರದ ಟ್ರೇಲರ್‌ ಯೂಟ್ಯೂಬ್‌ನಲ್ಲಿ ಈಗಾಗಲೇ 1.16 ಕೋಟಿ ವ್ಯೂವ್ಸ್‌ ದಾಟಿದೆ. ತರುಣ್ ಸುಧೀರ್‌ ನಿರ್ದೇಶಿಸಿರುವ ಈ ಚಿತ್ರಕ್ಕೆ ಉಮಾಪತಿ ಫಿಲ್ಮ್ಸ್‌ ಬ್ಯಾನರ್‌ ಅಡಿ ಉಮಾಪತಿ ಶ್ರೀನಿವಾಸ್‌ ಗೌಡ ನಿರ್ಮಾಪಕರಾಗಿದ್ದಾರೆ.

ನಾಯಕಿ ಆಶಾ ಭಟ್‌ ಈ ಚಿತ್ರದ ಮೂಲಕ ಚಂದನವನಕ್ಕೆ ಕಾಲಿಡುತ್ತಿದ್ದು, ವಿನೋದ್ ಪ್ರಭಾಕರ್, ದೇವರಾಜ್‌, ಶಿವರಾಜ್ ಕೆ.ಆರ್. ಪೇಟೆ, ರವಿಕಿಶನ್, ಚಿಕ್ಕಣ್ಣ, ರವಿಶಂಕರ್ ತಾರಾಗಣದಲ್ಲಿದ್ದಾರೆ. ಖಳನಟನಾಗಿ ಜಗಪತಿ ಬಾಬು ಅಭಿನಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.