ADVERTISEMENT

ವರ್ಲ್ಡ್ ಪ್ರೀಮಿಯರ್ ಫಿಲ್ಮ್‌ ಪ್ರಶಸ್ತಿಗೆ ಭಾಜನವಾದ ವರ್ಣಪಟಲ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 15:58 IST
Last Updated 21 ಜನವರಿ 2021, 15:58 IST
ವರ್ಣಪಟಲ
ವರ್ಣಪಟಲ   

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ‘ವರ್ಣಪಟಲ’ ಸಿನಿಮಾ ವರ್ಲ್ಡ್ ಪ್ರೀಮಿಯರ್ ಫಿಲ್ಮ್‌ ಪ್ರಶಸ್ತಿಗೆ ಭಾಜನವಾಗಿದೆ. ಹಿಂದೆ ಈ ಚಿತ್ರಕ್ಕೆ ಲಂಡನ್ ಇಂಡಿಪೆಂಡೆಂಟ್‌ ಫಿಲ್ಮ್ ಅವಾರ್ಡ್‌ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಕೂಡ ದಕ್ಕಿತ್ತು.

ನೈಜ ಘಟನೆಯಾಧಾರಿತ ಈ ಸಿನಿಮಾದಲ್ಲಿ ಕಿರುತೆರೆಯ ಖ್ಯಾತ ನಟಿ ಜ್ಯೋತಿ ರೈ ನಾಯಕಿಯಾಗಿ ನಟಿಸಿದ್ದಾರೆ. ತುಳು ಸಿನಿಮಾಗಳಿಂದ ಖ್ಯಾತಿ ಗಳಿಸಿರುವ ಅನೂಪ್ ಸಾಗರ್ ನಾಯಕನಾಗಿ ನಟಿಸಿದ್ದಾರೆ.

ಮಕ್ಕಳನ್ನು ಕಾಡುವ ಆಟಿಸಂ ಸಮಸ್ಯೆಯ ಕುರಿತ ಕಥೆಯನ್ನು ಹೊಂದಿದೆ ವರ್ಣಪಟಲ. ತಾಯಿ ಮಗುವಿನ ಬಾಂಧವ್ಯವೂ ಈ ಚಿತ್ರದಲ್ಲಿದೆ. ಖ್ಯಾತ ಬಹುಭಾಷಾ ನಟಿ ಸುಹಾಸಿನಿ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ADVERTISEMENT

ದಕ್ಷಿಣಕನ್ನಡದ ಮಡಂತ್ಯಾರು, ಮಂಗಳೂರು, ಮಡಿಕೇರಿ, ಬೆಂಗಳೂರಿನಲ್ಲಿ ಸಿನಿಮಾದ ಶೂಟಿಂಗ್ ನಡೆದಿತ್ತು. ಚಿತ್ರದಲ್ಲಿ ಧನಿಕ ಹೆಗ್ಡೆ, ಚೇತನ್ ರೈ ಮಾಣಿ, ಇಳಾ ವಿಟ್ಲಾ, ಅರವಿಂದ್ ರಾವ್‌ ಹಾಗೂ ಶ್ರೀಕಾಂತ್ ಹೆಬ್ಳಿಕರ್ ಮೊದಲಾದವರು ನಟಿಸಿದ್ದಾರೆ.

ಈ ಚಿತ್ರದ ಚಿತ್ರಕಥೆ ಹಾಗೂ ನಿರ್ಮಾಣದ ಹೊತ್ತಿದ್ದಾರೆ ಡಾ. ಸರಸ್ವತಿ ಹೊಸದುರ್ಗ, ಕವಿತಾ ಸಂತೋಷ್ ಹಾಗೂಪಲ್ಲವಿ. ಚಿತ್ರಕ್ಕೆ ಎ.ಪಿ. ಅರ್ಜುನ್ ಸಾಹಿತ್ಯವಿದ್ದು, ಕಿರುತೆರೆಯ ಖ್ಯಾತ ನಿರ್ದೇಶಕ ವಿನು ಬಳಂಜ ಸಂಭಾಷಣೆ ಬರೆದಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.