
ಲಕ್ಷ್ಮಣ ಉಟೇಕರ್ ನಿರ್ದೇಶಿಸಿರುವ ‘ಛಾವಾ’ ಸಿನಿಮಾ ತೆರೆಕಂಡು ಒಂದು ವರ್ಷ ಕಳೆದಿದೆ. ಈ ಸಂಬಂಧ ಬಾಲಿವುಡ್ ನಟ ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅವರು ಕೆಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ
-ಇನ್‌ಸ್ಟಾಗ್ರಾಮ್ ಚಿತ್ರ
2025ರ ಫೆಬ್ರುವರಿ 14 ರಂದು ಬಿಡುಗಡೆಯಾಗಿದ್ದ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಎರಡೇ ವಾರದಲ್ಲಿ ₹400 ಕೋಟಿಗೂ ಅಧಿಕ ಗಳಿಕೆ ಕಂಡಿತ್ತು.
ಮರಾಠಿ ಕಾದಂಬರಿಕಾರ ಶಿವಾಜಿ ಸಾವಂತ್ ಬರೆದಿರುವ ‘ಛಾವಾ’ ಕೃತಿಯನ್ನು ಆಧರಿಸಿ ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನ ಕುರಿತ ಚಿತ್ರ ಇದಾಗಿದೆ.
ಸಂಭಾಜಿ ಪಾತ್ರದಲ್ಲಿ ವಿಕ್ಕಿ ಕೌಶಲ್ ಅವರು ಅಭಿನಯಿಸಿದ್ದು, ಸಂಭಾಜಿ ಪತ್ನಿ ‘ಯಶುಬಾಯಿ’ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಬಣ್ಣ ಹಚ್ಚಿದ್ದಾರೆ.
ಮಡ್ಡೊಕ್ ಫಿಲ್ಮ್ಸ್‌ನ ದಿನೇಶ್ ವಿಜನ್ ನಿರ್ಮಾಣ ಮಾಡಿದ್ದ ಈ ಚಿತ್ರಕ್ಕೆ ಎ.ಆರ್. ರೆಹಮಾನ್ ಅವರು ಸಂಗೀತ ನೀಡಿದ್ದಾರೆ.
ಚಿತ್ರಗಳನ್ನು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ರಶ್ಮಿಕಾ ಮಂದಣ್ಣ, 'ಎಂತಹ ವಿಶೇಷ ಚಿತ್ರ. ಧನ್ಯವಾದಗಳು' ಎಂದು ಬರೆದುಕೊಂಡಿದ್ದಾರೆ
'ಛಾವಾ' ಚಿತ್ರದ ದೃಶ್ಯ
'ಛಾವಾ' ಚಿತ್ರದಲ್ಲಿ ಯಶುಬಾಯಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ
'ಛಾವಾ' ಚಿತ್ರದಲ್ಲಿ ಸಂಭಾಜಿ ಪಾತ್ರದಲ್ಲಿ ವಿಕ್ಕಿ ಕೌಶಲ್ ಮತ್ತು ಆತನ ಪತ್ಮಿ ಯಶುಬಾಯಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ
ಛತ್ರಪತಿ ಸಂಭಾಜಿ ಮಹಾರಾಜ್ ಅವರ ಕಥಾಹಂದರದ 'ಛಾವಾ' ಚಿತ್ರದಲ್ಲಿ ಸಂಭಾಜಿ ಪಾತ್ರದಲ್ಲಿ ವಿಕ್ಕಿ ಕೌಶಲ್
'ಛಾವಾ' ಚಿತ್ರದಲ್ಲಿ ಸಂಭಾಜಿ ಪಾತ್ರದಲ್ಲಿ ವಿಕ್ಕಿ ಕೌಶಲ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.