ಛಾವಾ
ಬೆಂಗಳೂರು: ಲಕ್ಷ್ಮಣ ಉಟೇಕರ್ ನಿರ್ದೇಶಿಸಿರುವ ‘ಛಾವಾ’ (Chhaava) ಹಿಂದಿ ಸಿನಿಮಾ ಫೆಬ್ರುವರಿ 14 ರಂದು ಚಿತ್ರಮಂದಿರಗಳಿಗೆ ಲಗ್ಗೆ ಇಡಲು ತಯಾರಾಗಿದೆ.
ಈ ಹಿನ್ನೆಲೆಯಲ್ಲಿ ಈ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದ್ದು ಸಿನಿಪ್ರಿಯರ ಗಮನ ಸೆಳೆದಿದೆ.
ಮರಾಠಿ ಕಾದಂಬರಿಕಾರ ಶಿವಾಜಿ ಸಾವಂತ್ ಬರೆದಿರುವ ‘ಛಾವಾ’ ಕೃತಿಯನ್ನು ಆಧರಿಸಿ ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನ ಕುರಿತ ಚಿತ್ರ ಇದಾಗಿದೆ.
ಸಂಭಾಜಿ ಪಾತ್ರದಲ್ಲಿ ವಿಕ್ಕಿ ಕೌಶಲ್ ಅವರು ಅಭಿನಯಿಸಿದ್ದು, ಸಂಭಾಜಿ ಪತ್ನಿ ‘ಯಶುಬಾಯಿ’ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಇದ್ದಾರೆ. ಬಾಲಿವುಡ್ ನಟ ಅಕ್ಷಯ್ ಖನ್ನಾ ಪ್ರಮುಖ ಪಾತ್ರದಲ್ಲಿದ್ದಾರೆ.
ಮಡ್ಡೊಕ್ ಫಿಲ್ಮ್ಸ್‌ನ ದಿನೇಶ್ ವಿಜನ್ ನಿರ್ಮಾಣ ಮಾಡಿದ್ದಾರೆ. ಎ.ಆರ್. ರೆಹಮಾನ್ ಅವರು ಸಂಗೀತ ನೀಡಿದ್ದಾರೆ.
ಲುಕಾ ಚುಪ್ಪಿ, ಮಿಮಿ ಅಂತಹ ಕಲಾತ್ಮಕ ಸಿನಿಮಾಗಳನ್ನು ನಿರ್ದೇಶಿಸಿದ್ದ ಲಕ್ಷ್ಮಣ ಉಟೇಕರ್ ಅವರು ಇದೀಗ ಐತಿಹಾಸಿಕ ಕಥೆ ಹೊಂದಿರುವ ಬಿಗ್ ಬಜೆಟ್ ಸಿನಿಮಾ ಮೂಲಕ ಬಾಲಿವುಡ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.