ಶಿವರಾಜ್ ಕುಮಾರ್– ಸಿದ್ದರಾಮಯ್ಯ ಭೇಟಿ
ಬೆಂಗಳೂರು: ಅನಾರೋಗ್ಯಕ್ಕೆ ಅಮೆರಿಕದಲ್ಲಿ ಚಿಕಿತ್ಸೆ ಪಡೆದು ಮರಳಿರುವ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ನಾಗವಾರದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ ಇತ್ತರು. ಶಿವರಾಜ್ ಕುಮಾರ್ ದಂಪತಿ ಜೊತೆ ಮಾತುಕತೆ ನಡೆಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ‘ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ಅವರು ತಿಳಿಸಿದ್ದಾರೆ’ ಎಂದರು.
ಈ ವೇಳೆ ಸಚಿವ ಬೈರತಿ ಸುರೇಶ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಪೊನ್ನಣ್ಣ, ಶಾಸಕ ಭೀಮಣ್ಣ ನಾಯ್ಕ್ ಇದೇ ವೇಳೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.