‘ಅಂಬಾರಿ’, ‘ಅದ್ಧೂರಿ’, ‘ಐರಾವತ’, ‘ರಾಟೆ’ಯಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಎ.ಪಿ.ಅರ್ಜುನ್ ತಮ್ಮದೇ ಎಪಿ ಅರ್ಜುನ್ ಫಿಲ್ಮ್ಸ್‌ನಡಿ ಮೂರನೇ ಸಿನಿಮಾ ಘೋಷಿಸಿದ್ದಾರೆ. ‘ಲಕ್ಷ್ಮೀಪುತ್ರ’ ಎಂಬ ಶೀರ್ಷಿಕೆ ಹೊತ್ತ ಈ ಸಿನಿಮಾದಲ್ಲಿ ನಟ ಚಿಕ್ಕಣ್ಣ ಮುಖ್ಯಭೂಮಿಕೆಯಲ್ಲಿದ್ದಾರೆ.
ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆದಿದ್ದು, ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ವಿಜಯ್ ಎಸ್.ಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ಚಿತ್ರವನ್ನು ಅರ್ಜುನ್ ಪತ್ನಿ ಅನ್ನಪೂರ್ಣ ಎ.ಪಿ. ಅರ್ಜುನ್ ನಿರ್ಮಾಣ ಮಾಡುತ್ತಿದ್ದಾರೆ. ಗಿರೀಶ್ ಆರ್. ಗೌಡ ಛಾಯಾಚಿತ್ರಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್. ಕುಮಾರ್ ಸಂಕಲನ, ಕೆ.ರವಿವರ್ಮಾ ಸಾಹಸ ನಿರ್ದೇಶನ, ಮೋಹನ್ ಬಿ. ಕೆರೆ ಕಲಾ ನಿರ್ದೇಶನ ಚಿತ್ರಕ್ಕಿದೆ. ಇದೇ ಜ.24ರಂದು ಚಿತ್ರದ ಮುಹೂರ್ತ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.