
ನಟ ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಸಿನಿಮಾದ ಕ್ಲೈಮ್ಯಾಕ್ಸ್‌ನ ಚಿತ್ರೀಕರಣ ಇತ್ತೀಚೆಗೆ ಕಾಶಿಯಲ್ಲಿ ನಡೆದಿದೆ.
ನಿರ್ದೇಶಕ ಎ.ಪಿ.ಅರ್ಜುನ್ ಕಥೆ ಬರೆದು ತಮ್ಮದೇ ಎಪಿ ಅರ್ಜುನ್ ಫಿಲ್ಮ್ ಬ್ಯಾನರ್‌ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಸಂಕ್ರಾಂತಿಯಂದು ಚಿಕ್ಕಣ್ಣ ಪಾತ್ರದ ಫಸ್ಟ್‌ಲುಕ್ ಬಿಡುಗಡೆ ಮಾಡಿದ್ದ ಚಿತ್ರತಂಡ ಮೂರು ದಿನ ಕಾಶಿಯಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಣ ಮಾಡಿದೆ. ಇದರಲ್ಲಿ ಚಿಕ್ಕಣ್ಣ, ನಟಿ ತಾರಾ ಸೇರಿದಂತೆ ಅರವತ್ತಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿದ್ದರು. ಕಾಶಿಯ ಮಣಿಕರ್ಣಿಕಾ ಘಾಟ್, ಗಂಗಾ ನದಿ ತೀರ, ಬನಾರಸ್ ಹಾಗೂ ಕಾಶಿಯ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಣ ನಡೆದಿದೆ.
ಎರಡು ದಿನದ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಶೀಘ್ರದಲ್ಲೇ ಹಾಡುಗಳ ಶೂಟಿಂಗ್ ಅನ್ನು ಚಿತ್ರತಂಡ ಆರಂಭಿಸಲಿದೆ. ಮೇ ಅಥವಾ ಜೂನ್‌ನಲ್ಲಿ ಸಿನಿಮಾವನ್ನು ರಿಲೀಸ್ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ವಿಜಯ್ ಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಸಿನಿಮಾದಲ್ಲಿ ಚಿಕ್ಕಣ್ಣ ಅವರಿಗೆ ಜೋಡಿಯಾಗಿ ವಂದಿತಾ ನಟಿಸಿದ್ದಾರೆ. ತಾರಾ, ಕುರಿ ಪ್ರತಾಪ್, ಧರ್ಮಣ್ಣ ಸೇರಿ ದೊಡ್ಡ ತಾರಾಗಣವೇ ಚಿತ್ರದಲ್ಲಿದೆ.
ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರಕ್ಕಿದ್ದು, ಹಾಡುಗಳಿಗೆ ಎ.ಪಿ.ಅರ್ಜುನ್ ಅವರೇ ಸಾಹಿತ್ಯ ಬರೆದಿದ್ದಾರೆ. ಆ್ಯಕ್ಷನ್ ಸೀಕ್ವೆನ್ಸ್‌ಗೆ ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್. ಗೌಡ ಛಾಯಾಚಿತ್ರಗ್ರಹಣ ಸಿನಿಮಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.