ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ತಮ್ಮ ಮುಂದಿನ ಚಿತ್ರದಲ್ಲಿ 'ವಾಲ್ಟರ್ ವೀರಯ್ಯ' ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಟಾಲಿವುಡ್ ಮೂಲಗಳು ತಿಳಿಸಿವೆ.
ವಾಲ್ಟರ್ ವೀರಯ್ಯ ಚಿತ್ರಕ್ಕೆ ಕೆ.ಎಸ್ ರವೀಂದ್ರ (ಬಾಬಿ) ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರವನ್ನು ಮೈತ್ರಿ ಸಂಸ್ಥೆ ನಿರ್ಮಾಣ ಮಾಡಲಿದೆ. ನಾಳೆ (ಆ.22) ಚಿರಂಜೀವಿ ಅವರ 66 ಜನ್ಮದಿನ ಆಚರಿಸಿಕೊಳ್ಳುತ್ತಿದ್ದು ಇದೇ ಸಂದರ್ಭದಲ್ಲಿ ಸಿನಿಮಾದ ಹೆಸರನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.
ನಾಳೆ ಚಿರಂಜೀವಿ ನಟಿಸುತ್ತಿರುವ ಇನ್ನು 2 ಸಿನಿಮಾಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಮೇಹರ್ ರಮೇಶ್ ನಿರ್ದೇಶನದ ಸಿನಿಮಾದಲ್ಲೂ ಚಿರು ನಟಿಸುತ್ತಿದ್ದಾರೆ.
ಬರುವದಸರಾದಲ್ಲಿ ವೀರಯ್ಯ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.
ಸದ್ಯ ಚಿರಂಜೀವಿ ‘ಆಚಾರ್ಯ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕೆ ಕೊರಟಾಲ ಶಿವ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಾಜಲ್ ಅಗರ್ವಾಲ್ ನಾಯಕಿಯಾಗಿ ನಟಿಸಿರುವ ಈ ಸಿನಿಮಾ ಬರುವ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.