ADVERTISEMENT

ತೆಲುಗಿನ ಮೆಗಾಸ್ಟಾರ್‌ ಚಿರಂಜೀವಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 6:21 IST
Last Updated 27 ಜನವರಿ 2022, 6:21 IST
ಚಿರಂಜೀವಿ
ಚಿರಂಜೀವಿ   

ಹೈದರಾಬಾದ್‌: ತೆಲುಗು ನಟ ಮೆಗಾಸ್ಟಾರ್‌ ಚಿರಂಜೀವಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು ಅವರು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದಾರೆ.

ಈ ಬಗ್ಗೆ ಚಿರಂಜೀವಿ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮನೆಯಲ್ಲಿಯೇ ನಾನು ಪ್ರತ್ಯೇಕ ವಾಸದಲ್ಲಿದ್ದೇನೆ. ನನ್ನ ಸಂಪರ್ಕಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಹಾಗೇ ಸದ್ಯ ನಿಮ್ಮನ್ನು ನೋಡಲು ಆಗುತ್ತಿಲ್ಲ, ಶೀಘ್ರವೇ ಗುಣಮುಖನಾಗಿ ಬರುತ್ತೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಚಿರಂಜೀವಿಗೆ 2020ರ ನವೆಂಬರ್‌ ತಿಂಗಳಲ್ಲಿ ಕೂಡ ಕೋವಿಡ್‌ ಸೋಂಕು ದೃಢಪಟ್ಟಿತ್ತು. ನಂತರದ ದಿನಗಳಲ್ಲಿ ಅವರು ಚೇತರಿಸಿಕೊಂಡು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ಬಹುನಿರೀಕ್ಷೆಯ ಸಿನಿಮಾ ’ಆಚಾರ್ಯ’ ಬಿಡುಗಡೆ ಸಿದ್ಧವಾಗಿದೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.