ADVERTISEMENT

Tollywood ಚಿರಂಜೀವಿ -ಶ್ರುತಿ ಹಾಸನ್ ನಟನೆ ‘ಚಿರು 154’ ಬಿಡುಗಡೆ ದಿನಾಂಕ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜೂನ್ 2022, 11:14 IST
Last Updated 24 ಜೂನ್ 2022, 11:14 IST
ತೆಲುಗು ಮೆಗಾಸ್ಟಾರ್ ಚಿರಂಜೀವಿ ಮತ್ತು ಶ್ರುತಿ ಹಾಸನ್‌
ತೆಲುಗು ಮೆಗಾಸ್ಟಾರ್ ಚಿರಂಜೀವಿ ಮತ್ತು ಶ್ರುತಿ ಹಾಸನ್‌    

ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಚಿರು 154’ ಚಿತ್ರದಲ್ಲಿ ಶ್ರುತಿ ಹಾಸನ್‌ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ 2023ರ ಸಂಕ್ರಾಂತಿ ಹಬ್ಬದ ದಿನಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಚಿರಂಜೀವಿ –ಶ್ರುತಿ ಹಾಸನ್‌ ಜೋಡಿ ಇದೇ ಮೊದಲ ಬಾರಿಗೆ ಒಟ್ಟಾಗಿ ಅಭಿನಯಿಸುತ್ತಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

ಕೆ.ಎಸ್. ರವೀಂದ್ರ (ಬಾಬಿ) ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಚಿರು 154’ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

ADVERTISEMENT

ಈಗಾಗಲೇ ಶೇ 40ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದ್ದು, ಟೈಟಲ್‌ ಟೀಸರ್ ಮತ್ತು ಪೋಸ್ಟರ್‌ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್‌ ಅವರ ಸಂಗೀತ ಸಂಯೋಜನೆ ಮತ್ತು ವಿಲ್ಸನ್‌ ಅವರ ಛಾಯಾಗ್ರಾಹಣವಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.