

ತಿರುವನಂತಪುರ: ಮಲಯಾಳ ಚಿತ್ರರಂಗದ ಯುವ ನಟ ಅಖಿಲ್ ವಿಶ್ವನಾಥ್ ಅವರು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
30 ವರ್ಷದ ಅಖಿಲ್ ವಿಶ್ವನಾಥ್ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿದೆ.
ಇತ್ತೀಚೆಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಅವರು, ಚಿಕಿತ್ಸೆ ಪಡೆಯುತ್ತಿದ್ದರು.
ಬಾಲನಟನಾಗಿ ಮಾಲಿವುಡ್‌ನಲ್ಲಿ ಅವರು ಪದಾರ್ಪಣೆ ಮಾಡಿದ್ದರು. ಮಂಗಂಡಿ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಬಾಲನಟ ರಾಜ್ಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು.
2019ರಲ್ಲಿ ಬಿಡುಗಡೆಯಾಗಿದ್ದ ಚೋಳ ಸಿನಿಮಾದಲ್ಲಿನ ಇವರ ಪಾತ್ರವು ಸಿನಿ ರಸಿಕರ ಗಮನಸೆಳೆದಿತ್ತು. ಈ ಸಿನಿಮಾದಲ್ಲಿನ ಪಾತ್ರಕ್ಕಾಗಿ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.
ಆಪರೇಷನ್ ಜಾವಾ, ಚೋಳ, ಮಂಗಂಡಿ ಸಿನಿಮಾಗಳಲ್ಲಿ ನಟಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.