ADVERTISEMENT

ನಟ ಶರಣ್ ಅಭಿನಯದ ‘ಛೂ ಮಂತರ್’ ಚಿತ್ರದ ಟ್ರೇಲರ್ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2025, 23:30 IST
Last Updated 1 ಜನವರಿ 2025, 23:30 IST
ಶರಣ್‌
ಶರಣ್‌   

ಶರಣ್ ನಾಯಕರಾಗಿ ನಟಿಸಿರುವ ‘ಛೂ‌ ಮಂತರ್’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದೆ. ನವನೀತ್ ನಿರ್ದೇಶಿಸಿರುವ ಚಿತ್ರ ಜ.10ಕ್ಕೆ ತೆರೆ ಕಾಣಲಿದೆ. ತರುಣ್ ಸ್ಟುಡಿಯೋಸ್ ಚಿತ್ರವನ್ನು ನಿರ್ಮಾಣ ಮಾಡಿದೆ. 

‘ಸಾಮಾನ್ಯವಾಗಿ ಸಂಕ್ರಾಂತಿ ಸಮಯದಲ್ಲಿ ಬೇರೆ ಭಾಷೆಗಳ ದೊಡ್ಡ ಚಿತ್ರಗಳು ಬಿಡುಗಡೆಯಾಗುವುದರಿಂದ ಕನ್ನಡದ ಚಿತ್ರಗಳನ್ನು ಆ ಸಮಯದಲ್ಲಿ ಹೆಚ್ಚಾಗಿ ಬಿಡುಗಡೆ ಮಾಡುವುದಿಲ್ಲ. ನಮ್ಮ ಚಿತ್ರದ ಕಂಟೆಂಟ್ ಚೆನ್ನಾಗಿದೆ. ಜನರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಹೀಗಾಗಿ ಸಂಕ್ರಾಂತಿ ಸಮಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ’ ಎಂದು ನಿರ್ಮಾಪಕ ತರಣ್ ಶಿವಪ್ಪ ತಿಳಿಸಿದ್ದಾರೆ.

ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರು ಚಿತ್ರದಲ್ಲಿದ್ದಾರೆ. ಅನೂಪ್ ಕಟ್ಟುಕರನ್ ಛಾಯಾಚಿತ್ರಗ್ರಹಣ, ಚಂದನ್ ಶೆಟ್ಟಿ ಸಂಗೀತ ನಿರ್ದೇಶನವಿರುವ ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.