ಪೃಥ್ವಿ ಅಂಬರ್
ಪೃಥ್ವಿ ಅಂಬರ್ ನಟನೆಯ ‘ಚೌಕಿದಾರ್’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ರೋಮ್ಯಾಂಟಿಕ್, ಭಾವನಾತ್ಮಕ ಪಾತ್ರಗಳಿಗೆ ಸೀಮಿತವಾಗಿದ್ದ ಪೃಥ್ವಿ ಈ ಚಿತ್ರದಲ್ಲಿ ಲಾಂಗ್ ಹಿಡಿದು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಚಿತ್ರಕ್ಕೆ ಕಲ್ಲಹಳ್ಳಿ ಚಂದ್ರಶೇಖರ್ ಬಂಡವಾಳ ಹೂಡಿದ್ದಾರೆ. ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ.
ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದ್ದು, ಸುಧಾರಾಣಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಧನ್ಯ ರಾಮಕುಮಾರ್ ಚಿತ್ರದ ನಾಯಕಿ. ಹಿರಿಯ ನಟ ಸಾಯಿಕುಮಾರ್ ನಾಯಕನ ತಂದೆ ಪಾತ್ರದಲ್ಲಿದ್ದಾರೆ. ಧರ್ಮ, ಹಿರಿಯ ನಟಿ ಶ್ವೇತಾ ತಾರಾ ಬಳಗದಲ್ಲಿದ್ದಾರೆ.
ಸಚಿನ್ ಬಸ್ರೂರ್ ಸಂಗೀತ, ಸಿದ್ದು ಕಂಚನಹಳ್ಳಿ ಛಾಯಾಚಿತ್ರಗ್ರಹಣವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.