‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ನಟಿಸಿರುವ ‘ಚೌಕಿದಾರ್’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ.
‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾದ ಆಡಿಯೊ ಹಕ್ಕುಗಳನ್ನು ಲಹರಿ ಸಂಸ್ಥೆಯ ಭಾಗವಾಗಿರುವ ಎಂಆರ್‌ಟಿ ಮ್ಯೂಸಿಕ್ ಖರೀದಿಸಿದೆ. ಒಂದೊಳ್ಳೆಯ ಮೊತ್ತಕ್ಕೇ ಹಕ್ಕುಗಳು ಮಾರಾಟವಾಗಿವೆ ಎಂದು ಚಿತ್ರತಂಡ ತಿಳಿಸಿದೆ. ಸಿನಿಮಾದಲ್ಲಿ ರಗಡ್ ಪಾತ್ರಕ್ಕೆ ಪೃಥ್ವಿ ಬಣ್ಣಹಚ್ಚಿದ್ದಾರೆ. ‘ಚೈತ್ರದ ಪ್ರೇಮಾಂಜಲಿ’ ಚಿತ್ರದ ನಾಯಕಿ ಶ್ವೇತಾ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಮೂಲಕ ಅವರು ಮತ್ತೊಮ್ಮೆ ಬೆಳ್ಳಿಪರದೆಗೆ ಕಾಲಿಟ್ಟಿದ್ದಾರೆ. ಡೈಲಾಗ್ ಕಿಂಗ್ ಸಾಯಿಕುಮಾರ್ ಕೂಡ ಈ ಸಿನಿಮಾದಲ್ಲಿದ್ದಾರೆ. ನಟಿ ಸುಧಾರಾಣಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಬಣ್ಣಹಚ್ಚಿದ್ದಾರೆ. ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ನೀಡಿದ್ದಾರೆ. ಹಾಡುಗಳಿಗೆ ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಸಾಹಿತ್ಯವಿದೆ. ‘ಚೌಕಿದಾರ್’ ಬಹುಭಾಷೆಯಲ್ಲಿ ಮೂಡಿಬರಲಿದ್ದು, ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.