‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ಆ್ಯಕ್ಷನ್ ಕಟ್ ಹೇಳಿರುವ ‘ಚೌಕಿದಾರ್’ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಈ ಚಿತ್ರದ ಮೂಲಕ ನಟ ಪೃಥ್ವಿ ಅಂಬಾರ್ ಹೊಸ ಲುಕ್‌ನಲ್ಲಿ ಪ್ರೇಕ್ಷಕರ ಎದುರಿಗೆ ಬರಲಿದ್ದಾರೆ.
ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ಈ ಚಿತ್ರದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಟೀಸರ್‌ನಲ್ಲಿ ಪಾತ್ರಗಳ ಪರಿಚಯ ಮಾಡಿರುವ ನಿರ್ದೇಶಕರು ಕಥೆಯ ಗುಟ್ಟು ಬಿಟ್ಟುಕೊಟ್ಟಿಲ್ಲ. ಕನ್ನಡ ಹಾಗೂ ತೆಲುಗಿನಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದ್ದು, ಪೊಲೀಸ್ ಅಧಿಕಾರಿಯಾಗಿ ಸುಧಾರಾಣಿ ನಟಿಸಿದ್ದಾರೆ. ಹಿರಿಯ ನಟ ಸಾಯಿಕುಮಾರ್ ಪೃಥ್ವಿಯ ತಂದೆ ಪಾತ್ರದಲ್ಲಿ ಬಣ್ಣಹಚ್ಚಿದ್ದು, ಧರ್ಮ, ನಟಿ ಶ್ವೇತಾ ತಾರಾಬಳಗದಲ್ಲಿದ್ದಾರೆ.
ಸಚಿನ್ ಬಸ್ರೂರ್ ಸಂಗೀತ ಟೀಸರ್‌ನ ಪ್ಲಸ್ ಪಾಯಿಂಟ್. ಸಿನಿಮಾವನ್ನು ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದು, ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಚಿತ್ರಗ್ರಹಣ ಸಿನಿಮಾಗಿದೆ. ಜೂ.1ರಂದು ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗುವುದು. ಶೀಘ್ರದಲ್ಲೇ ರಿಲೀಸ್ ದಿನಾಂಕವನ್ನು ಘೋಷಿಸುವುದಾಗಿ ಚಿತ್ರತಂಡ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.