ನಟಿ ಶಬಾನಾ ಆಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು.
ಪ್ರಶಸ್ತಿಯ ಜತೆಗೆ ₹10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.