
ಸಿಎಂ ಸಿದ್ದರಾಮಯ್ಯ, ದುನಿಯಾ ವಿಜಯ್
ಬೆಂಗಳೂರು: ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯಲ್ಲಿ ಮೂಡಿಬಂದಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾ ನಿನ್ನೆ (ಜ.23) ರಾಜ್ಯದಾದ್ಯಂತ ಬಿಡುಗಡೆಯಾಗಿದೆ. ಈ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯನವರು ಸಿನಿಮಾವನ್ನು ವೀಕ್ಷಿಸಿಲಿದ್ದಾರೆ.
ಈ ಬಗ್ಗೆ ಖುದ್ದು ಸಿಎಂ ಸಿದ್ದರಾಮಯ್ಯನವರು ಮಾಹಿತಿ ನೀಡಿದ್ದಾರೆ. ‘ಇವತ್ತಿಗೆ ಈ ಸಿನಿಮಾ ಅವಶ್ಯಕ. ನಾನು ಈ ಸಿನಿಮಾವನ್ನು ನೋಡೇ ನೋಡ್ತೀನಿ. ಎಲ್ಲರೂ ನೋಡಲೇಬೇಕಾದ ಸಿನಿಮಾವಿದು. ಶೋಷಣೆಗೊಳಗಾದವರ ಕಥೆ. ಹೋರಾಟದ ಕಥೆ’ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ, ದುನಿಯಾ ವಿಜಯ್
ನಟ ದುನಿಯಾ ವಿಜಯ್ ಅವರನ್ನು ಖುದ್ದು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲ್ಯಾಂಡ್‌ಲಾರ್ಡ್ ಚಿತ್ರಕ್ಕೆ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆಗಳನ್ನು ಕೇಳಿ ಸಿನಿಮಾ ನೋಡಲು ಬಯಸಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ನಿಂಗವ್ವ..ನಿಂಗವ್ವ, ರೋಮಾಂಚಕ ಹಾಡುಗಳು ಪ್ರೇಕ್ಷಕರಿಗೆ ಇಷ್ಟವಾಗಿವೆ.
ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರ ಹಿರಿಯ ಪುತ್ರಿ ರಿತನ್ಯಾ ವಿಜಯ್‌ಕುಮಾರ್ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ದುನಿಯಾ ವಿಜಯ್ ಮಗಳ ಪಾತ್ರದಲ್ಲಿ ನಟಿಸಿದ್ದು, ‘ಭಾಗ್ಯ’ ಎಂಬ ಪಾತ್ರಕ್ಕೆ ಜೀವತುಂಬಿದ್ದಾರೆ. ರಿತನ್ಯಾ ಅವರು ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಜಡೇಜ ಕೆ.ಹಂಪಿ ನಿರ್ದೇಶಿಸಿದ್ದು, ಕೆ.ವಿ ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ ಅವರು ನಿರ್ಮಾಣ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.