ಪೋಷಕ ನಟ ರಾಕ್‌ಲೈನ್ಸುಧಾಕರ್ ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶಶಿಧರ ಕೆ.ಎಂ. ನಿರ್ದೇಶನದ ‘ಶುಗರ್ಲೆಸ್ ಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಾಘಾತವಾಗಿದೆ. ಕನ್ನಡ ಚಿತ್ರರಂಗದಲ್ಲಿ ಅವರು ಹಾಸ್ಯನಟರಾಗಿ ಗುರುತಿಸಿಕೊಂಡಿದ್ದರು.
ಯೋಗರಾಜ್ ಭಟ್ ನಿರ್ದೇಶಿಸಿದ ‘ಪಂಚರಂಗಿ’, ‘ಪರಮಾತ್ಮ’, ‘ಟೋಪಿವಾಲಾ’, ‘ಅಧ್ಯಕ್ಷ‘, ‘ಲವ್ ಇನ್ ಮಂಡ್ಯ’, ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ’, ‘ವಾಸ್ತುಪ್ರಕಾರ’, ‘ಜೂಮ್’ ಅವರು ನಟಿಸಿರುವ ಪ್ರಮುಖ ಚಿತ್ರಗಳಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.