ADVERTISEMENT

ಸಲ್ಮಾನ್ ಖಾನ್ ಸಿನಿಮಾಗೆ ಕನ್ನಡಿಗ ರವಿ ಬಸ್ರೂರ್ ಸಂಗೀತ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 10:59 IST
Last Updated 13 ಅಕ್ಟೋಬರ್ 2021, 10:59 IST
ಅಂತಿಮ್‌ ಸಿನಿಮಾ ಪೋಸ್ಟರ್‌
ಅಂತಿಮ್‌ ಸಿನಿಮಾ ಪೋಸ್ಟರ್‌   

ಕೆಜಿಎಫ್ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕರವಿ ಬಸ್ರೂರ್ ಅವರು ಸಲ್ಮಾನ್‌ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿ, ನಿರ್ಮಾಣ ಮಾಡುತ್ತಿರುವ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಈ ಬಗ್ಗೆ ಅವರೇ ತಮ್ಮ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ’ಬಾಲಿವುಡ್‌ ಬಾಯಿಜಾನ್ ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುತ್ತಿರುವುದು ನನಗೆ ಸಂತಸ ತಂದಿದೆ. ಅವರ ಸಿನಿಮಾದಲ್ಲಿ ಹಿನ್ನೆಲೆ ಸಂಗೀತ ಹಾಗೂ ಹಾಡುಗಳಿಗೆ ರಾಗ ಸಂಯೋಜನೆ ಮಾಡುತ್ತಿದ್ದೇನೆ. ನನ್ನ ಈ ಪಯಣಕ್ಕೆ ನಿಮ್ಮ ಬೆಂಬಲ ಇರಲಿ' ಎಂದು ಟ್ವೀಟ್‌ ಮಾಡಿದ್ದಾರೆ.

ಸಲ್ಮಾನ್‌ ಖಾನ್‌ ’ಅಂತಿಮ್‌’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದರಲ್ಲಿ ಪ್ರಮುಖ ಪಾತ್ರದಲ್ಲಿ ಸಹ ನಟಿಸುತ್ತಿದ್ದಾರೆ. ಈ ಸಿನಿಮಾವನ್ನು ಮಹೇಶ್‌ ಮಂಜ್ರೆಕರ್‌ ನಿರ್ದೇಶನ ಮಾಡುತ್ತಿದ್ದು,ಆಯುಷ್‌ ಶರ್ಮಾನಾಯಕರಾಗಿದ್ದಾರೆ.

ADVERTISEMENT

ರವಿ ಬಸ್ರೂರ್‌ಕೆಜಿಎಫ್‌ ಸಿನಿಮಾದ ಬಳಿಕ ತಮಿಳು ಹಾಗೂ ಮಲಯಾಳಂ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಈಗಾಗಲೇ ಹಿಂದಿಯ ಮೂರು ಸಿನಿಮಾಗಳಿಗೆ ಸಂಗೀತ ಕೊಟ್ಟಿದ್ದಾರೆ.

ಬಾಲಿವುಡ್‌ನದೊಡ್ಡ ಬ್ಯಾನರ್‌ನಲ್ಲಿ ಇದೇ ಮೊದಲ ಬಾರಿಗೆ ಅವಕಾಶ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.