ADVERTISEMENT

ನಟಿ ಮೇಘನಾ ರಾಜ್‌ ತಂದೆ-ತಾಯಿಗೆ ಕೋವಿಡ್‌: ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2020, 10:28 IST
Last Updated 8 ಡಿಸೆಂಬರ್ 2020, 10:28 IST
ಪ್ರಮಿಳಾ ಜೋಷಾಯ್‌, ಮೇಘನಾರಾಜ್‌, ಸುಂದರ್‌ರಾಜ್‌
ಪ್ರಮಿಳಾ ಜೋಷಾಯ್‌, ಮೇಘನಾರಾಜ್‌, ಸುಂದರ್‌ರಾಜ್‌   

ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ ಕುಟುಂಬಕ್ಕೆ ತಾಪತ್ರಯಗಳು ತಪ್ಪುತ್ತಿಲ್ಲ. ಮೇಘನಾ ತಂದೆ ಸುಂದರ್‌ರಾಜ್‌ ಮತ್ತು ತಾಯಿ ಪ್ರಮೀಳಾ ಜೋಷಾಯ್‌ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರೂ ನಗರದ ಬನಶಂಕರಿಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೇಘನಾ ರಾಜ್‌ ಮತ್ತು ಅವರ ಎರಡು ತಿಂಗಳ ಮಗುವಿಗೂ ಹದಿನೈದು ದಿನಗಳ ಹಿಂದೆಯೇ ಕೊರೊನಾ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದು, ತಾಯಿ– ಮಗು ಮನೆಯಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈಗ ಇಬ್ಬರ ಕೊರೊನಾ ಪರೀಕ್ಷಾ ವರದಿಯೂ ನೆಗೆಟಿವ್‌ ಬಂದಿದೆ.

ಹಿರಿಯ ನಟಿ ಪ್ರಮೀಳಾ ಜೋಷಾಯ್‌ ಅವರಿಗೆ ಜ್ವರ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ನಾಲ್ಕು ದಿನಗಳ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ನಟ ಸುಂದರ್‌ ರಾಜ್‌ ಅವರಿಗೂ ಎರಡು ದಿನಗಳಿಂದ ಮೈಕೈ ನೋವು ಮತ್ತು ಜ್ವರ ಕಾಣಿಸಿಕೊಂಡಿತ್ತು. ಮಂಗಳವಾರ ಬೆಳಿಗ್ಗೆ ಸುಂದರ್‌ರಾಜ್‌ ಅವರನ್ನು ಸಹ ಬನಶಂಕರಿಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಯಿಸಿತು. ಇಬ್ಬರಿಗೂ ವಯಸ್ಸಾಗಿರುವ ಕಾರಣಕ್ಕೆ ಹೆಚ್ಚಿನ ಕಾಳಜಿ ವಹಿಸಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಆತಂಕಪಡುವ ಸನ್ನಿವೇಶ ಇಲ್ಲ. ಇಬ್ಬರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸುಂದರ್‌ರಾಜ್‌ ಕುಟುಂಬದ ಆಪ್ತ ಮೂಲಗಳು ‘ಪ್ರಜಾಪ್ಲಸ್‌’ಗೆ ತಿಳಿಸಿವೆ.

ADVERTISEMENT

ಮೇಘನಾ ಇತ್ತೀಚೆಗಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದು, ಬಾಣಂತನಕ್ಕಾಗಿ ತವರು ಮನೆಯಲ್ಲಿದ್ದಾರೆ. ಕಳೆದ ನವೆಂಬರ್‌ನಲ್ಲಿ ಮಗುವನ್ನು ತೊಟ್ಟಿಲಿಗೆ ಹಾಕುವ ಶಾಸ್ತ್ರ ಕುಟುಂಬದ ಆಪ್ತರ ಮತ್ತು ಬಂಧುಗಳ ಸಮ್ಮುಖದಲ್ಲಿ ಸರಳವಾಗಿ ನಡೆದಿತ್ತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.