ADVERTISEMENT

ಚಿತ್ರ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್‌

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 11:26 IST
Last Updated 22 ಜೂನ್ 2021, 11:26 IST
ಕನ್ನಡ ಚಿತ್ರೋದ್ಯಮದ ಪ್ರತಿನಿಧಿಗಳು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚಿತ್ರರಂಗದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ ನೆರವು ಘೋಷಿಸುವಂತೆ ಕೋರಿ ಮನವಿ ಸಲ್ಲಿಸಿದರು. 
ಕನ್ನಡ ಚಿತ್ರೋದ್ಯಮದ ಪ್ರತಿನಿಧಿಗಳು ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚಿತ್ರರಂಗದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‌ ನೆರವು ಘೋಷಿಸುವಂತೆ ಕೋರಿ ಮನವಿ ಸಲ್ಲಿಸಿದರು.    

ಬೆಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರಗಳ ಕಾರ್ಮಿಕರಿಗೆ ಮುಖ್ಯಮಂತ್ರಿ ಘೋಷಿಸಿದ್ದ ₹ 3 ಸಾವಿರ ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್‌ನ ನೆರವು ನೀಡಲು ಸೇವಾ ಸಿಂಧು ಪೋರ್ಟಲ್‌ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಅರ್ಜಿ ಆಹ್ವಾನಿಸಿದೆ.

ಚಲನಚಿತ್ರ ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ವೆಬ್‌ ಪೋರ್ಟಲ್‌ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.

ಒಬ್ಬರು ಒಂದು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಶಿಫಾರಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಅಪ್‌ಲೋಡ್‌ ಮಾಡಬೇಕು. ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಿತ್ರ ಮಂದಿರದ ಮಾಲೀಕರ ಪತ್ರದೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿಯು 2021ರ ಜುಲೈ 9ರ ವರೆಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಲಭ್ಯವಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ಲೈನ್ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ಮಾರ್ಗದರ್ಶನಕ್ಕಾಗಿ ಸಹಾಯವಾಣಿಯ ಮೊಬೈಲ್ ಸಂಖ್ಯೆ 8904645529 ಅನ್ನು ಸಂಪರ್ಕಿಸಬಹುದು ಅಥವಾ dpmfilm1@gmail.com ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.