ಬೆಂಗಳೂರು: ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕನ್ನಡ ಚಲನಚಿತ್ರ ಕಾರ್ಮಿಕರಿಗೆ ನಟ ಶಿವರಾಜ್ ಕುಮಾರ್ ₹ 10 ಲಕ್ಷ ನೆರವು ನೀಡಿದ್ದಾರೆ.
ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕರಿಗೆ ಈ ನೆರವು ನೀಡಲಾಗುತ್ತಿದೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ. ಶಿವರಾಜ್ ಕುಮಾರ್ ಅವರ ನೆರವಿನ ಚೆಕ್‌ನ್ನು ಇಂದು ಚಲನ ಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಹಸ್ತಾಂತರಿಸಲಾಯಿತು. ನಿರ್ಮಾಪಕ ಕೆ.ಪಿ. ಶ್ರೀಕಾಂತ್, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಸಮ್ಮುಖದಲ್ಲಿ ಚೆಕ್ ಹಸ್ತಾಂತರಿಸಲಾಯಿತು.
ಇತ್ತೀಚೆಗೆ ನಟ ಪುನೀತ್ ರಾಜ್ ಕುಮಾರ್ ಕೂಡಾ ₹ 10 ಲಕ್ಷ ನೆರವು ನೀಡಿದ್ದರು. ನಟ ಯಶ್ ಅವರು ಕೂಡಾ ಚಿತ್ರ ಕಾರ್ಮಿಕರ ಖಾತೆಗೆ ನೇರ ನಗದು ಪಾವತಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.